ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಪುನರಾಯ್ಕೆ- ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು
ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆಯಾದರು.
ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಪುನರಾಯ್ಕೆಗೊಂಡರು.ನೂತನ ನಿರ್ದೇಶಕರಾದ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.
Post a Comment