ನಾಗುರ: ಮುಂಬರುವ ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂಡಿಯಾ ಬಣ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದ್ದಾರೆ.
'ಮೈತ್ರಿ ಮಾಡಿಕೊಂಡರೆ, ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಇದರಿಂದ ಪಕ್ಷದ ಬೆಳಗವಣಿಗೆಗೆ ತೊಡಕುಂಟಾಗಲಿದೆ. ನಾವು ಮುಂಬೈ, ಠಾಣೆ, ನಾಗುರ ಸೇರಿ ಇತರ ಮುನ್ಸಿಪಲ್ ಕಾರ್ಪೊರೇಷನ್‌ಗಳು, ಜಿಲ್ಲಾ ಪಂಚಾಯತ್ ಹಾಗೂ ಇತರ ಪಂಚಾಯತ್‌ಗಳಲ್ಲಿ ನಮ್ಮ ಬಲದಿಂದಲೇ ಸ್ಪರ್ಧೆ ಮಾಡುತ್ತೇವೆ' ಎಂದು ರಾವುತ್ ಹೇಳಿದ್ದಾರೆ.
ಏಕಾಂಗಿಯಾಗಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೇ ಸೋಲಿಗೆ ಕಾರಣ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರಿಗೆ ತಿರುಗೇಟು ನೀಡಿದ ರಾವುತ್, ಒಮ್ಮತ ಮತ್ತು ಹೊಂದಾಣಿಕೆಯಲ್ಲಿ ನಂಬಿಕೆ ಇಲ್ಲದವರಿಗೆ ಮೈತ್ರಿ ಮಾಡಿಕೊಳ್ಳುವ ಹಕ್ಕಿಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯ ನಂತರ ಇಂಡಿಯಾ ಮೈತ್ರಿಕೂಟ ಒಂದೇ ಒಂದು ಸಭೆಯನ್ನೂ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.
'ನಮಗೆ ಇಂಡಿಯಾ ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಿಸಲು ಸಾಧ್ಯವಾಗಲಿಲ್ಲ. ಅದು ಒಳ್ಳೆಯದಲ್ಲ. ಮೈತ್ರಿಕೂಟದ ದೊಡ್ಡ ಪಕ್ಷವಾಗಿ, ಸಭೆಯನ್ನು ಕರೆಯುವುದು ಕಾಂಗ್ರೆಸ್‌ನ ಜವಾಬ್ದಾರಿಯಾಗಿದೆ' ಎಂದು ಅವರು ಹೇಳಿದ್ದಾರೆ.
Post a Comment