ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಮೇಲುಗೈ
ಮುರುಳ್ಯ - ಎಣ್ಮರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನೂತನ ಆಡಳಿತ ಮಂಡಳಿ ರಚನೆಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಸ್ಥಾನಗಳಲ್ಲಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 11 ಸ್ಥಾನಗಳ ನಿರ್ದೇಶಕ ಸ್ಥಾನಕ್ಕೆ ಇಂದು ಚುನಾವಣೆ ನಡೆದು, ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಯಿತು. ಎಲ್ಲಾ 11 ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ.
ಪ.ಪಂಗಡ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ದಿನೇಶ್ ಪಜಿಂಬಿಲ ಅವಿರೋಧ ಆಯ್ಕೆಯಾಗಿದ್ದರು.ಸಾಮಾನ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅನೂಪ್ ಬಿಳಿಮಲೆ, ನಾಗೇಶ್ ಆಳ್ವ ಕೆ., ನೇಮೀಶ ಕಡೀರ, ರಾಜೇಂದ್ರ ಪ್ರಸಾದ್ ಶೆಟ್ಟಿ, ರೂಪರಾಜ ರೈ, ವಸಂತ ಹೆಚ್.ಕೆ., ಮಹಿಳಾ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ನವ್ಯಶ್ರೀ ಕೆ.ಬಿ., ಸುಧಾರಾಣಿ, ಹಿಂದುಳಿದ ವರ್ಗ ಬಿ ಯಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಯಾಗಿ ವಸಂತ ನಡುಬೈಲು, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಯಾಗಿ ಮುತ್ತಪ್ಪ ಎಸ್, ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಯಾಗಿ ಶಿವರಾಮ ಸಿ. ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಸಾಮಾನ್ಯ ಸ್ಥಾನದಿಂದ ರಮೇಶ್ ಕೋಟೆ ಹಾಗೂ ಲೋಕನಾಥ್ ರೈ ಎನ್, ಮಹಿಳಾ ಮೀಸಲು ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಶುಭಮಂಗಳ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಮಾಯಿಲಪ್ಪ ಗೌಡ ಪಿ, ಪರಿಶಿಷ್ಟ ಜಾತಿ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿಗ ಬೋರ ಇ., ಹಿಂದುಳಿದ ವರ್ಗ ಎ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಜನಾರ್ದನ ಎ ಪರಾಭವಗೊಂಡರು.
Post a Comment