ಸುಳ್ಯ: ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಆಡಳಿತಾಧಿಕಾರಿ ಜಿ.ಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ಇವರ ಅಧ್ಯಕ್ಷತೆಯಲ್ಲಿ .
ಸಭೆಯ ಪ್ರಾರಂಭದಲ್ಲಿಯೇ ಅಧಿಕಾರಿಗಳು ಕಾಮಗಾರಿಗಳ ಪ್ರಗತಿಗಳ ಬಗ್ಗೆ ವಿವರಣೆ ಪಡೆದಾಗ ಅಧಿಕಾರಿಗಳು ಅಸಮರ್ಪಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳು ಅನುದಾನ ಉಳಿಕೆ ಮತ್ತು ಶೇಕಾಡವಾರು ಕಡಿಮೆ ಇರುವುದನ್ನು ಗಮನಿಸಿ ಗರಂ ಆದ ಜಿ.ಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಎಚ್ಚರಿಕೆ ನೀಡಿದರು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಅಲ್ಲದೇ ಒಂದು ವಾರದ ಒಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ತಾ.ಪ. ಇಓ ರಾಜಣ್ಣ, ಉಪ ತಹಶೀಲ್ದಾರ್ ಮಂಜುನಾಥ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Post a Comment