ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗುತ್ತಿದ್ದು, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ದಾವಣಗೆರೆ ಹಾಗೂ ಮೈಸೂರಿನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಒಣಹವೆ ಮುಂದುವರೆಯಲಿದೆ. ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಎಚ್ಎಎಲ್ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.













































