ಛತ್ತೀಸಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಸಾವು: ಇಬ್ಬರು ಭದ್ರತಾ ಸಿಬ್ಬಂದಿ ಹತ

Picture of Savistara

Savistara

Bureau Report

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ

ಎಡಪಂಥೀಯ ತೀವ್ರಗಾಮಿ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಭದ್ರತಾ ಪಡೆಯ ಇಬ್ಬರು ಸಿಬ್ಬಂದಿಯೂ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement

ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಒಟ್ಟು 81 ನಕ್ಸಲರು ಭದ್ರತಾ ಪಡೆಗಳಿಂದ ಹತರಾದಂತಾಗಿದೆ.

Advertisement

ಭಾನುವಾರ ಬೆಳಿಗ್ಗೆ ಇಂದ್ರಾವತಿ ನ್ಯಾಷನಲ್ ಪಾರ್ಕ್‌ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ಪಡೆ ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ ಎಂದು ಬಸ್ತಾರ್ ವಲಯದ ಇನ್‌ಸ್ಪೆಕ್ಟ‌ರ್ ಜನರಲ್ ಆಫ್ ಪೊಲೀಸ್ ಸುಂದರ್ ರಾಜ್ ಪಿ. ತಿಳಿಸಿದ್ದಾರೆ.’ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಆಯುಧಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisement

ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆಯ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡಿರುವವರು ಅಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ಕರೆಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಈ ವರ್ಷ ಸಾವಿಗೀಡಾದ ಒಟ್ಟು 81 ನಕ್ಸಲರಲ್ಲಿ, 65 ಮಂದಿಯನ್ನು ಬಸ್ತಾ‌ರ್ ವಲಯದಲ್ಲೇ ಕೊಲ್ಲಲಾಗಿದೆ.ಕಳೆದ ವರ್ಷ ಛತ್ತೀಸಗಢದ ವಿವಿಧೆಡೆ ನಡೆದ ಎನ್‌ಕೌಂಟರ್‌ನಲ್ಲಿ 219 ನಕ್ಸಲರನ್ನು ಕೊಲ್ಲಲಾಗಿತ್ತು.

Advertisement
News Updates

ಐವರ್ನಾಡು – ನನ್ಯಡ್ಕ ಎಸ್.ಸಿ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕೆ ಅನುದಾನ ಮಂಜೂರಾತಿಗೆ ಮನವಿ: ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಒತ್ತಾಯ | ಸರ್ವೆ ಕಾರ್ಯ ಪೂರ್ಣ, ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಕೋರಿಕೆ

[t4b-ticker]
error: Content is protected !!