ಚುನಾವಣಾ ಸಮೀಕ್ಷೆ:ಹರಿಯಾಣ ದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ,ಜಮ್ಮು ಮತ್ತು ಕಾಶ್ಮೀರ ಅತಂತ್ರ

Picture of Savistara

Savistara

Bureau Report

ಬೆಂಗಳೂರು: ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗೆ
ಮತದಾನ ಇಂದು ಸಂಪನ್ನಗೊಂಡಿದೆ. ಅಕ್ಟೋಬ‌ರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದ್ದು, ಯಾರಿಗೆ ಬಹುಮತ ಒಲಿಯಲಿದೆ ಎಂದು ಕುತೂಹಲ ಗರಿಗೆದರಿದೆ. ಮತಚಲಾವಣೆಯ ಅವಧಿಯ ಮುಗಿಯುತ್ತದ್ದಂತೆ ವಿವಿಧ ವಿದ್ಯುನ್ಮಾನ ಮಾಧ್ಯಮಗಳು ಸಂಸ್ಥೆಗಳು ನಡೆಸಿದ ಮತಗಟ್ಟೆ ಸಮೀಕ್ಷೆ ಪ್ರಕಟಗೊಂಡಿವೆ. ಎಕ್ಸಿಟ್ ಪೋಲ್ ಭವಿಷ್ಯ ನಿಜವಾಗಲಿದೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಿಜವಾಗಲಿದೆಯೇ ಮತಗಟ್ಟೆ ಸಮೀಕ್ಷೆ ?

ಈ ಬಾರಿಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಮತ್ತೊಂದೆಡೆ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದ್ದರೂ ಕಾಂಗ್ರೆಸ್‌ ಮೈತ್ರಿಕೂಟ ಮುನ್ನಡೆ ಗಳಿಸಲಿವೆ ಎಂದು ಭವಿಷ್ಯ ನುಡಿದಿವೆ.

ಜಮ್ಮು ಮತ್ತು ಕಾಶ್ಮೀರ ಮತಗಟ್ಟೆ ಸಮೀಕ್ಷೆ: (ಒಟ್ಟು ಸ್ಥಾನ 90, ಮ್ಯಾಜಿಕ್ ಸಂಖ್ಯೆ: 46)

ದೈನಿಕ್ ಬಾಸ್ಕ‌ರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ 35ರಿಂದ 40 ಸ್ಥಾನಗಳು ಸಿಗಲಿವೆ. ಬಿಜೆಪಿ 20ರಿಂದ 25 ಸ್ಥಾನಗಳನ್ನು ಗಳಿಸಲಿವೆ.

ಪೀಪಲ್ಸ್ ಪಲ್ಸ್ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಸರಳ ಬಹುಮತ ಪಡೆಯಲಿದ್ದು, 46ರಿಂದ 50 ಸ್ಥಾನಗಳನ್ನು ಗಳಿಸಲಿದೆ. ಬಿಜೆಪಿ 23ರಿಂದ 27 ಸ್ಥಾನಗಳು ಪಡೆಯಲಿವೆ ಎಂದು ಅಂದಾಜಿಸಲಾಗಿದೆ.

ಇಂಡಿಯಾ ಟುಡೇ ಸಿ-ವೋಟರ್ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಸಿಗಲಿದೆ. ಕಾಂಗ್ರೆಸ್ 40ರಿಂದ 48 ಮತ್ತು ಬಿಜೆಪಿ 27ರಿಂದ 32 ಸ್ಥಾನಗಳನ್ನು ಗಳಿಸಲಿವೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!