ಏಪ್ರಿಲ್-ಮೇ ಉತ್ತಮ ಮಳೆ ಸಾಧ್ಯತೆ: ಫೆಬ್ರುವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು

Picture of Savistara

Savistara

Bureau Report

ಬೆಂಗಳೂರು: ಪ್ರಸಕ್ತ ವರ್ಷ ಫೆಬ್ರುವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್‌ನಷ್ಟು ಬಿಸಿಲು ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖ ಆಗಬಹುದು. ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿಯ ಸಭೆಗೆ ಅಧಿಕಾರಿಗಳು ಈ ಮಾಹಿತಿ ನೀಡಿದರು.

2025ನೇ ಸಾಲಿನ ಹಿಂಗಾರು-ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ‘ಮಾರ್ಚ್ ಕೊನೆಯ ವಾರ ಮತ್ತು ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖ ಆಗಬಹುದು’ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.

ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು. ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಜಲಾಶಯಗಳಲ್ಲಿ ನೀರು ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪನ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯಲು ಅವಶ್ಯವಿರುವ ನೀರು ಕಾಯ್ದಿರಿಸಿದ ಬಳಿಕ ನೀರಾವರಿಗೆ ನೀರು ಬಿಡುಗಡೆಗೊಳಿಸುವ ಬಗ್ಗೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ, ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕೃಷ್ಣ ಬೈರೇಗೌಡ ಸೂಚಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭೆಯಲ್ಲಿದ್ದರು.

ಕುಡಿಯುವ ನೀರು ಪೂರೈಕೆಚಿಕ್ಕಬಳ್ಳಾಪುರ ಚಿತ್ರದುರ್ಗ ತುಮಕೂರು ಬೆಂಗಳೂರು ನಗರ ಮತ್ತು ರಾಮನಗರ ಈ ಐದು ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ಹಾಗೂ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್‌ಗಳಿಗೆ ಬಾಡಿಗೆ ಟ್ಯಾಂಕ‌ರ್ ಮತ್ತು ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ, ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕೃಷ್ಣ ಬೈರೇಗೌಡ ಸೂಚಿಸಿದರು.ಲೋಕೋಪಯೋಗಿ ಸಚಿವ ಸತೀಶಜಾರಕಿಹೊಳಿ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭೆಯಲ್ಲಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!