ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ: ಡಾ. ನರೇಂದ್ರ ರೈ ದೇರ್ಲ

Picture of Savistara

Savistara

Bureau Report

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ. ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ ನಿಟ್ಟಿನಲ್ಲಿ ಓದುವ ಹವ್ಯಾಸವನ್ನು ಮೂಡಿಸಿಕೊಂಡು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದುಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ವಹಿಸಿದ್ದರು‌. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ ಕಾರ್ಯಕ್ರಮದ ಸಂಘಟಕರು, ಕನ್ನಡ ಸಂಘದ ಸಂಚಾಲಕರೂ ಆದ ಡಾ. ಅನುರಾಧಾ‌ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕಿ ಡಾ. ಮಮತಾ ಕೆ ವಂದಿಸಿ, ವಿದ್ಯಾರ್ಥಿನಿ‌ ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.

[t4b-ticker]
error: Content is protected !!