ಪುರುಷ ಪ್ರಯಾಣಿಕರಿಗೆ ಸೀಟ್ಸಿಗುವಂತೆ ನೋಡಿಕೊಳ್ಳಿ| KSRTCಯಿಂದ ಸಿಬ್ಬಂದಿಗೆ ಸೂಚನೆ

Picture of Savistara

Savistara

Bureau Report

ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್‌ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.ಮೈಸೂರು ವಿಭಾಗದ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!