ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ | ಮಾರ್ಚಲ್ಲಿ ಹೆಚ್ಚಾಗಲಿದೆ ತಾಪ: ಸಚಿವ ಬೈರೇಗೌಡ

Picture of Savistara

Savistara

Bureau Report

ಫೆಬ್ರವರಿ-ಮಾರ್ಚ್‌ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿ ಯಸ್ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆ ಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.ಗುರುವಾರ ವಿಧಾನಸೌಧದಲ್ಲಿ ಪ್ರಕೃತಿ ವಿಕೋಪ ಸಂಬಂಧ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಪ್ರಸ್ತುತ ಸಾಲಿನ ಹಿಂಗಾರು-ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಈ ವೇಳೆ ಅಧಿಕಾರಿಗಳು ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ.

ಏಪ್ರಿಲ್- ಮೇ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ. ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ.ಆದರೆ, ಹಿಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್ ಡಿಸೆಂಬರ್‌ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂದು ಮಾಹಿತಿ ನೀಡಿದರು. ಬಳಿಕ ಸಚಿವ ಕೃಷ್ಣ ಬೈರೇಗೌಡ, ಬಿಸಿ-ತಾಪ ಹೆಚ್ಚಾಗುವುದರಿಂದ ಬೇಸಿಗೆಯ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಅಲ್ಲದ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!