ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರು, ತಮ್ಮ ಕಾರ್ಡ್ ಗೆ ಹೊಸದಾಗಿ ಸದಸ್ಯರ ಹೆಸರು ಸೇರ್ಪಡೆ, ತೆಗೆದು ಹಾಕೋದಕ್ಕೆ, ಹೆಸರು ತಿದ್ದುಪಡಿ ಮಾಡೋದಕ್ಕೆ ಆಹಾರ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಇದೇ ಮಾರ್ಚ್ 31ರವರೆಗೆ ಅವಕಾಶ ನೀಡಲಾಗಿದೆ.ಹೌದು, ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31ರ ಅಂತ್ಯದವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.













































