ಪುತ್ತೂರಿನಲ್ಲಿ ಹೊಸ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅಸ್ತು : ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ

Picture of Savistara

Savistara

Bureau Report

ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್‌ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು, ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದ್ಯಕೀಯ ಕಾಲೇಜ್ ಘೋಷಿಸಿದ್ದಾರೆ.

ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು, ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದ್ಯಕೀಯ ಕಾಲೇಜ್ ಘೋಷಿಸಿದ್ದಾರೆ.

ಪುತ್ತೂರಿನಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಾರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತಿಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಬಜೆಟ್ ಪತ್ರದಲ್ಲಿ ತಿಳಿಸಲಾಗಿದೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪುತ್ತೂರಲ್ಲಿ ಮೆಡಿಕಲ್‌ ಕಾಲೇಜ್ ಸ್ಥಾಪಿಸುವುದಾಗಿ ಶಾಸಕ ಅಶೋಕ್‌ ರೈಯವರು ಘೋಷಿಸಿದ್ದರು . ತಾವು ಶಾಸಕರಾಗಿ ಆಯ್ಕೆಯಾದ ಬಳಿಕ ರಂತರವಾಗಿ ಅಶೋಕ್ ರೈಯವರು ಸರಕಾರದ ಮೇಲೆ ಒತ್ತಡ ಹಾಕುವ ಕಾರ್ಯ ಮಾಡಿದ್ದರು. ಕಂದಾಯ ಇಲಾಖೆಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಮೂಲಕ ವೈದ್ಯಕೀಯ ಕಾಲೇಜು ಪ್ರಸ್ತಾವನೆಯನ್ನು ಸರಕಾರದ ತುತ್ತತುದಿಗೆ ಮುಟ್ಟಿಸುವ ಪ್ರಯತ್ನ ಮಾಡಿದ್ದರು.

ಅದಲ್ಲದೇ ತನ್ನದೇ ಪಕ್ಷ ಅಧಿಕಾರದಲ್ಲಿದ್ದರೂ ಆರೋಗ್ಯ ಸಚಿವರು, ಉಪ ಮುಖ್ಯಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಯಾವುದೇ ಮುಲಾಜಿಲ್ಲದೇ ಒತ್ತಡ ಹಾಕುವ ಕಾರ್ಯ ಮಾಡಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ತುಂಬಿದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಒತ್ತಡ ಹಾಕುವ ಕಾರ್ಯ ಮಾಡಿಸಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಸಭಿಕರು ‘ವಿ ವಾಂಟ್ ಮೆಡಿಕಲ್ ಕಾಲೇಜ್’ ಎಂಬ ಘೋಷಣೆ ಕೂಗುವ ಮೂಲಕ ವೈದ್ಯಕೀಯ ಕಾಲೇಜಿನ ಅಗತ್ಯತೆಯನ್ನು ಉಪ ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡಿದರು.ಕಳೆದ ಜುಲೈನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಬಗ್ಗೆ ಸರ್ಕಾರ ನಿಲುವೇನು? ಎಂಬ ಪ್ರಶ್ನೆಯನ್ನು ಎತ್ತಿದ್ದರು. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆ‌ರ್. ಪಾಟೀಲ್‌ ಉತ್ತರಿಸಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸುಮಾರು 610 ಕೊಟಿ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ಅವರ್ತಕ ವೆಚ್ಚ ಅವಶ್ಯಕತೆ ಇದೆ.

ಅನುದಾನದ ಲಭ್ಯತೆಯ ಆಧಾರದಲ್ಲಿ ಜಿಲ್ಲೆಯಲ್ಲಿ ಕಾಲೇಜು ಪ್ರಾರಂಭಿಸಲು ಪರಿಶೀಲಿಸಲಾಗುವುದು. ಸದ್ಯ ಪುತ್ತೂರು ತಾಲೂಕಿನಲ್ಲಿ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ ಎಂದು ಉತ್ತರ ನೀಡಿದ್ದರು.ಈ ಉತ್ತರ ಬಂದ ಆರು ತಿಂಗಳಿನ ಬಳಿಕ ಮಂಡನೆಯಾದ ಬಜೆಟ್ ನಲ್ಲಿ ಸರಕಾರ ಪುತ್ತೂರಿನಲ್ಲಿ ಹೊಸ ಮೆಡಿಕಲ್‌ ಕಾಲೇಜ್ ಸ್ಥಾಪಿಸಲು ಉದ್ದೇಶಿಸಲಾಗಿದೆ ಘೋಷಿಸಿರುವುದು ವಿಶೇಷವಾಗಿದೆ.

[t4b-ticker]
error: Content is protected !!