ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

Picture of Savistara

Savistara

Bureau Report

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಯಲವನ್ನು ಡಾ.ಮನಮೋಹನ್ ಸಿಂಗ್ (Manmohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ (CM Siddaramaiah) 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು.

ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!