ಮಹಿಳಾ ಸಮೃದ್ಧಿ ಯೋಜನೆಗೆ ಅನುಮೋದನೆ: ಮಹಿಳೆಯರ ಖಾತೆಗೆ ₹2,500

Picture of Savistara

Savistara

Bureau Report

ನವದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ದೆಹಲಿ ಸಚಿವ ಸಂಪುಟವು ಮಹಿಳಾ ಸಮೃದ್ಧಿ ಯೋಜನೆ ಅನುಷ್ಠಾನಗೊಳಿಸಲು ಅನುಮೋದನೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶನಿವಾರ ಘೋಷಿಸಿದರು.

ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಅವರು, ಮಹಿಳಾ ಸಮೃದ್ಧಿ ಯೋಜನೆಯಡಿ ಅರ್ಹ ಮಹಿಳೆಯರು ಪ್ರತಿ ತಿಂಗಳು ₹2,500 ಪಡೆಯಲಿದ್ದಾರೆ. ಸುಮಾರು ₹5,100 ಕೋಟಿ ವೆಚ್ಚದಲ್ಲಿ ಈ ಯೋಜನೆ ಜಾರಿಯಾಗಲಿದೆ. ದೆಹಲಿ ಸಚಿವ ಸಂಪುಟವು ಈಗಾಗಲೇ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯ ಪರಿಚಯದಿಂದಾಗಿ ದೆಹಲಿಯಲ್ಲಿ ಮಹಿಳಾ ಸಬಲೀಕರಣ ಪ್ರಾರಂಭವಾಗಿದೆ. ಮಹಿಳೆಯರ ಬೆಂಬಲವಿಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಗೆಲುವು ಸಾಧ್ಯವಾಗುತ್ತಿರಲಿಲ್ಲ. ಪಕ್ಷದ ಯಶಸ್ಸಿನಲ್ಲಿ ಮಹಿಳೆಯರ ಪಾತ್ರವಿದೆ ಎಂದು ನಡ್ಡಾ ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇತರೆ ಹಿರಿಯ ನಾಯಕರು ಉಪಸ್ಥಿತರಿದ್ದರು.

ದೆಹಲಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಮಹಿಳೆಯರಿಗೆ ₹2,500 ನೀಡುವುದಾಗಿ ಘೋಷಿಸಿದ್ದರು.70 ಸದಸ್ಯರ ಬಲ ಹೊಂದಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆದ್ದು, 26 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

[t4b-ticker]
error: Content is protected !!