ಹೈಕೋರ್ಟ್‌ ಆದೇಶ ಉಲ್ಲಂಘನೆ ಆರೋಪ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

Picture of Savistara

Savistara

Bureau Report

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ, ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.ಸಾರ್ವಜನಿಕ ಸಭೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧವಾಗಿ, ಅವರ ಕುಟುಂಬ,

ಸಂಸ್ಥೆಗಳ ಬಗ್ಗೆ ಅಪಪ್ರಚಾರ ಹಾಗೂ ಮಾನಹಾನಿಕರವಾಗಿ ಮಾತನಾಡಬಾರದು ಎಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾಷಣ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಫೆ.8 ರಂದು ಬೆಳ್ತಂಗಡಿ ತಾಲೂಕಿನ ಬೆದ್ರ ಬೆಟ್ಟುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನೀಡಿರುವ ಹೇಳಿಕೆಗಳು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಹಾಗೂ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವುದಾಗಿದೆ ಎಂದು ಪ್ರಕರಣ ದಾಖಲಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!