ಜಾರಿ ನಿರ್ದೇಶನಾಲಯ ಅಮಿತ್ ಶಾ, ಮೋದಿಯ ಸಾಕು ನಾಯಿ: ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್

Picture of Savistara

Savistara

Bureau Report

ಹೊಸದಿಲ್ಲಿ: ಜಾರಿ ನಿರ್ದೇಶನಾಲಯವು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಸಾಕುನಾಯಿ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಟೀಕಿಸಿದ್ದಾರೆ.

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುತ್ರ ಚೈತನ್ಯ ಬಘೇಲ್ ಮತ್ತು ಆಪ್ತರಿಗೆ ಸೇರಿದ 14 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು ಸೋಮವಾರ ದಾಳಿ ದಾಳಿ ನಡೆಸಿದರು. ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಮಾಣಿಕ್ಕಂ ಠಾಗೋರ್, ಈಡಿಯು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರ ಸಾಕುನಾಯಿಯಾಗಿರುವುದು ನಮಗೆಲ್ಲರಿಗೂ ತಿಳಿದಿದೆ. ಅವರು ಈ ನಾಯಿಯನ್ನು ಎಲ್ಲಿ ಬೇಕಾದರೂ ಕಳುಹಿಸಬಹುದು. ಭೂಪೇಶ್ ಬಘೇಲ್ ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದಾರೆ. ಅವರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ಛತ್ತೀಸ್‌ಗಢದ ಜನತೆ ಭೂಪೇಶ್ ಬಘೇಲ್ ಅವರ ಜೊತೆಗಿದೆ. ಬಿಜೆಪಿ ಮತ್ತು ಆರೆಸ್ಸೆಸ್‌ನ ಈ ನಕಲಿ ನಿರೂಪಣೆಗಳನ್ನು ಸೋಲಿಸಲಾಗುವುದು ಎಂದು ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!