ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಸ್ಥಳ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಕೆಲವು ಪ್ರಶ್ನೆಗಳು ಕೇಳಿದ್ದು ಸರಕಾರ ನೀಡಿದ ಉತ್ತರದ ಪ್ರಕಾರ ಭವಿಷ್ಯದಲ್ಲಿ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಅಲ್ಲದೆ, ಮಾಸ್ಟರ್ ಪ್ಲಾನ್ ಅಡಿಯಲ್ಲಿ ಕೆಲವು ಯೋಜನೆಗಳು ಈಗಾಗಲೇ ನಡೆಯುತ್ತಿದ್ದು, ಇನ್ನಷ್ಟು ಯೋಜನೆಗಳು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆಯೆಂದು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಲಿಖಿತ ಉತ್ತರ ನೀಡಿದ್ದಾರೆ.
1. ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಮಾಡುವ ಮುಂದೆ ಯಾವ ದೇವಸ್ಥಾನವನ್ನು ಪ್ರಾಧಿಕಾರವಾಗಿ ಪ್ರಸ್ತಾಪ ಸರ್ಕಾರದ ಇದೆಯ ಇದ್ದಲ್ಲಿ ಕಾಲಮಿತಿಯಲ್ಲಿ ಅಭಿವೃದ್ಧಿ ಪ್ರಾಧಿಕಾರ ಮಾಡಲಾಗುವುದು; ಇಲ್ಲವಾದಲ್ಲಿ ಅಭಿವೃದ್ಧಿ ಪ್ರಾಧಿಕಾರ ಮಾಡದೇ ಇರುವುದಕ್ಕೆ ಕಾರಣಗಳೇನು?
ಉ. ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲ್ಲೂಕು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಮನವಿ ಸ್ವೀಕೃತಗೊಂಡಿರುತ್ತದೆ. ಸದರಿ ಪ್ರಾಧಿಕಾರವನ್ನು ರಚಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ.
2. ಕುಕೆ, ಸುಬ್ರಹ್ಮಣ್ಯದ ಎಷ್ಟು ಪ್ರದೇಶ ವ್ಯಾಪ್ತಿಯನ್ನು ಪ್ರಾಧಿಕಾರದ ವ್ಯಾಪ್ತಿಗೆ ಒಳಪಡಿಸಲಾಗುವುದು.
ಉ. ಪ್ರಸ್ತಾಪಿತ ದೇವಾಲಯಕೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಸದರಿ ಪ್ರಕರಣಗಳು ಇತ್ಯರ್ಥವಾದ ನಂತರ ಕುಕ್ಕ ಸುಬ್ರಹ್ಮಣ್ಯದ ಎಷ್ಟು ಪ್ರದೇಶ ವ್ಯಾಪ್ತಿಯನ್ನು ಪ್ರಾಧಿಕಾರದ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂಬುದನ್ನು ನಿರ್ಧರಿಸಬಹುದಾಗಿರುತ್ತದೆ.
3. ಅಭಿವೃದ್ಧಿ ಪ್ರಾಧಿಕಾರ ಮಾಡಲು ಇರುವ ಮಾನದಂಡಗಳೇನು, ಪ್ರಮುಖ ಜನಸಂಖ್ಯೆಯ ಮಿತಿಯಿದೆಯೇ?
ಉ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮತ್ತು ದೇವಾಲಯಗಳಲ್ಲಿನ ಆದಾಯವನ್ನು ಆಧರಿಸಿ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ವಿವಿಧ ಇಲಾಖೆಗಳ ಸಹಕಾರ ಮತ್ತು ಅನುಮತಿ ಅಗತ್ಯವಿರುವುದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಪ್ರಾಧಿಕಾರ ರಚಿಸಿದಲ್ಲಿ ಅಗತ್ಯವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿಯಾಗಲಿದೆ ಎಂಬ ಅಂಶಗಳನ್ನು ಪರಿಗಣಿಸಲಾಗುತ್ತಿದೆ.
4. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಸ್ಟರ್ ಪ್ರಾನ್‌ನಂತೆ ಅಭಿವೃದ್ಧಿ ಕಾರ್ಯಗಳಿಗೆ ಈವರೆಗೆ ಒಟ್ಟು ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ; ಯಾವೆಲ್ಲ ಕಾಮಗಾರಿಗಳನ್ನು ಮಾಡಲಾಗಿದೆ ಪ್ರಸಕ್ತ ಸಾಲಿನಲ್ಲಿ ಎಷ್ಟು ಅನುದಾನ ಮೀಸಲಿಡಲಾಗಿದೆ? (ಕೈಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಗಳ ವಿವರ ನೀಡುವುದು)
ಉ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ವತಿಯಿಂದ ರೂ.180.00 ಕೋಟಿಗಳ ವೆಚ್ಚದಲ್ಲಿ ದೇವಸ್ಥಾನ ನಗರಿಯ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ವ್ಯಾನ್ ಯೋಜನೆ ರೂಪಿಸಲಾಗಿದ್ದು ಸರ್ಕಾರ ಆದೇಶ ಸಂಖ್ಯೆ ಕಂಇ 14 ಮುಅಕಾ 2008, 20 30.10.2008ರಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವಿವಿಧ ಕಾಮಗಾರಿಗಳಿಗಾಗಿ ಮುಖ್ಯ ಅಭಿಯಂತರರು, ಸಂಪರ್ಕ ಮತ್ತು ಕಟ್ಟಡಗಳು (ದ) ಲೋಕೋಪಯೋಗಿ ಇಲಾಖೆ ರವರು ತಯಾರಿಸಿರುವ ರೂ.180.00 ಕೋಟಿಗಳ ರೇಖಾಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುತ್ತದೆ.













































