ತಾಪಮಾನ ಮುನ್ನೆಚ್ಚರಿಕೆಗೆ ದ.ಕ. ಜಿಲ್ಲಾಡಳಿತ ಸೂಚನೆ

Picture of Savistara

Savistara

Bureau Report

ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಉಷ್ಣಾಂಶ(ಹೀಟ್ ವೇವ್) ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರೆಯುವ ಮುನ್ಸೂಚನೆ ಇದೆ. ಇದರಿಂದ ಹೀಟ್‌ವೇವ್ ಸ್ಟೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಬಿಸಿಗಾಳಿಗೆ ಸಲಹೆಗಳು: ಮಧ್ಯಾಹ್ನ 12ರಿಂದ 3ರವರೆಗೆಬಿಸಿಲಿಗೆ ಹೋಗಬಾರದು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರ, ತಿಳಿಬಣ್ಣದ, ಸಡಿಲ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ ಬಳಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು.ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ನಿಂಬೆ ನೀರು, ಮಜ್ಜಿಗೆ, ಎಳನೀರು ಬಳಸಬೇಕು. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಮನೆಯನ್ನು ತಂಪಾಗಿ ಇರಿಸಲು ಕ್ರಮ ವಹಿಸಬೇಕು. ವಾಹನಗಳಿಗೆ ಫುಲ್‌ಟ್ಯಾಂಕ್ ಇಂಧನ ಹಾಕಬಾರದು ಹಾಗೂ ನೆರಳಿನಲ್ಲಿ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!