ಪ್ರಸಾದ್ ಯೋಜನೆ : ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 18.37 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಪ್ರವಾಸೋದ್ಯಮ ಇಲಾಖೆ

Picture of Savistara

Savistara

Bureau Report

ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಮಂಗಳವಾರ 18.37 ಕೋಟಿ ರೂ.ಅನುದಾನವನ್ನೂ ಘೋಷಿಸಿದೆ.

ಹೊಸದಿಲ್ಲಿ: ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಮಂಗಳವಾರ 18.37 ಕೋಟಿ ರೂ.ಅನುದಾನವನ್ನೂ ಘೋಷಿಸಿದೆ.

ಈ ಕುರಿತಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಶೇಖಾವತ್ ಟ್ವಿಟ್ ಮಾಡಿದ್ದು” ಪ್ರಸಾದ್ (ಪಿಆರ್‌ಎಎಸ್‌ಎಚ್‌ಎಡಿ) ಯೋಜನೆ ಅನ್ವಯ ಕರ್ನಾಟಕದ ಬೆಳಗಾವಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಸಚಿವಾಲಯ ಅನುಮೋದನೆ ನೀಡಿದೆ.” ಎಂದಿದ್ದಾರೆ.

ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳನ್ನು ಒಟ್ಟು 18.37 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದಲ್ಲಿ ನಿರ್ಮಿಸಲಾಗುವುದು. ಇದರಿಂದ ಭಕ್ತರಿಗೆ ಅನುಕೂಲವಾಗಲಿದೆ’ ಎಂದಿದ್ದಾರೆ.

ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದಕ್ಕೆ ಧನ್ಯವಾದ ತಿಳಿಸಿ, ಕೇಂದ್ರದ ನಿರ್ಣಯದಿಂದ ಯಲ್ಲಮ್ಮನ ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯ ಸಿಗಲಿದೆ ಎಂದಿದ್ದಾರೆ.

ಇದೀಗ ಸುಳ್ಯದ ತೊಡಿಕಾನ ಮತ್ತು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ ಅಭಿವೃದ್ಧಿ ಗೆ ಪ್ರಸಾದ್ ಯೋಜನೆಯಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

[t4b-ticker]
error: Content is protected !!