ಕುಂಭಮೇಳ ಕಾಲ್ತುಳಿತ | ಬೆಳಗಾವಿಯ ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ 1 ಕೋಟಿ ಪರಿಹಾರ ಹಣ ಜಮೆ

Picture of Savistara

Savistara

Bureau Report

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ (MahaKumbhamela Stampede) ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ (Belagavi) ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ (Uttara Pradesh) ಸರ್ಕಾರ ನೀಡಿದೆ.

ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಜ.29 ರಂದು ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ನಾಲ್ವರಾದ ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ, ಮಹಾದೇವಿ ಬಾವನೂರ ಮೃತಪಟ್ಟಿದ್ದರು.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜ.29 ರಂದು ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.ಈ ಕುರಿತು ಸ್ವತಃ ಡಿಸಿ ಮಾಹಿತಿ ಹಂಚಿಕೊಂಡಿದ್ದು, ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆಯಾಗಿದೆ. ನಾಲ್ವರಿಗೆ ತಲಾ 25 ಲಕ್ಷ ರೂ.ಯಂತೆ 1 ಕೋಟಿ ರೂ. ಪರಿಹಾರ ವಿತರಣೆಯಾಗಿದ್ದು, ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!