ಭಟ್ಕಳದಲ್ಲಿ ಅಕ್ರಮ ಕೋಣ ಸಾಗಾಟ – 17 ಕೋಣಗಳು ವಶ, ಇಬ್ಬರ ಬಂಧನ

Picture of Savistara

Savistara

Bureau Report

ಕಾರವಾರ: ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ ವಾಹನದಲ್ಲಿ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಪಿಎಸ್‍ಐ ರನ್ನಗೌಡ ಪಾಟೀಲ್ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ವಾಹನದ ಸಮೇತ 17 ಕೋಣಗಳನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ 2ಕೋಣಗಳು ಸಾವನ್ನಪ್ಪಿವೆ. ಈ ಸಂಬಂಧ ಭಟ್ಕಳದ ಶಿರಾಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!