ಅರೆಸೆಸ್ಸ್ ನಿಂದ ಜೀವನದ ಉದ್ದೇಶವನ್ನು ಕಂಡುಕೊಂಡಿದ್ದೇನೆ, ಅದೊಂದು ಪ್ರೇರಣೆ ಪ್ರಧಾನಿ ಮೋದಿ

Picture of Savistara

Savistara

Bureau Report

ನವದೆಹಲಿ: ಆರ್‌ಎಸ್‌ಎಸ್‌ಗಿಂತ ದೊಡ್ಡ ಸ್ವಯಂಸೇವ ಸಂಘ ಜಗತ್ತಿನಲ್ಲಿ ಇಲ್ಲ. ಆರ್‌ಎಸ್‌ಎಸ್‌ ನಂತಹ ಗೌರವಾನ್ವಿತ ಸಂಸ್ಥೆಯಿಂದ ನಾನು ಜೀವನದ ಸಾರ ಮತ್ತು ಮೌಲ್ಯಗಳನ್ನು ಕಲಿತಿದ್ದೇನೆ. ನಾನು ನನ್ನ ಜೀವನದ ಉದ್ದೇಶ ಕಂಡುಕೊಂಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ ಗುಣಗಾನ ಮಾಡಿದರು.

ಲೆಕ್ಸ್ ಫ್ರಿಡ್‌ಮನ್ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಮೋದಿ ಅವರು, ಆರ್‌ಎಸ್‌ಎಸ್‌ ಜೊತೆಗಿನ ಸಂಬಂಧ ಹಾಗೂ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಆರ್‌ಎಸ್‌ಎಸ್‌ ನಂತಹ ಗೌರವಾನ್ವಿತ ಸಂಸ್ಥೆಯಿಂದ ನಾನು ಜೀವನದ ಸಾರ ಮತ್ತು ಮೌಲ್ಯಗಳನ್ನು ಕಲಿತಿದ್ದೇನೆ. ನಾನು ನನ್ನ ಜೀವನದ ಉದ್ದೇಶ ಕಂಡುಕೊಂಡಿದ್ದೇನೆ. ಬಾಲ್ಯದಲ್ಲಿ ಆರ್‌ಎಸ್‌ಎಸ್ ಕೂಟಗಳಲ್ಲಿ ಭಾಗವಹಿಸುವುದು ಸಂತೋಷವಾಗುತ್ತಿತ್ತು. ಆಗಲೂ ನನ್ನ ಮನಸ್ಸಿನಲ್ಲಿ ಯಾವಾಗಲೂ ಒಂದು ಗುರಿ ಇತ್ತು. ಅದರಂತೆ ದೇಶಕ್ಕೆ ಉಪಯೋಗವಾಗುವುದನ್ನು ಮಾಡಲು ‘ಸಂಘ’ ನನಗೆ ಕಲಿಸಿದೆ. ಈ ವರ್ಷ ಆರ್‌ಎಸ್‌ಎಸ್ 100 ವರ್ಷಗಳನ್ನು ಪೂರೈಸಿದೆ ಎಂಬುದು ಹೆಮ್ಮೆ ಎಂದು ಶ್ಲಾಘಿಸಿದರು.ಆರ್‌ಎಸ್‌ಎಸ್‌ಗಿಂತ ದೊಡ್ಡ ‘ಸ್ವಯಂಸೇವ ಸಂಘ’ ಜಗತ್ತಿನಲ್ಲಿ ಇಲ್ಲ. ಆರ್‌ಎಸ್‌ಎಸ್‌ನ ಕಾರ್ಯವನ್ನು ಅರ್ಥಮಾಡಿಕೊಳ್ಳುವುದು ಸುಲಭದ ಕೆಲಸವಲ್ಲ. ನಮ್ಮ ವೈದಿಕ ಸಂತರು ಮತ್ತು ಸ್ವಾಮಿ ವಿವೇಕಾನಂದರು ಏನನ್ನು ಕಲಿಸಿದರೋ ಅದೇ ರೀತಿ ʻಸಮಾಜ ಸೇವೆಯೇ ದೇವರ ಸೇವೆʼ ಎಂದು ಸಂಘ ಕಲಿಸುತ್ತದೆ ಎಂದು ಹೇಳಿದರು.

ಅಲ್ಲದೇ ಆರ್‌ಎಸ್‌ಎಸ್‌ನ ಕೆಲ ಸದಸ್ಯರು ಶಿಕ್ಷಣದಲ್ಲಿ ಕ್ರಾಂತಿ ತರಲು ʻವಿದ್ಯಾ ಭಾರತಿʼ ಎಂಬ ಸಂಘಟನೆಯನ್ನು ಪರಿಚಯಿಸಿದರು. ಅವರಿಂದು ದೇಶಾದ್ಯಂತ 70,000 ಶಾಲೆಗಳನ್ನು ನಡೆಸುತ್ತಿದ್ದಾರೆ. 30 ಲಕ್ಷ ವಿದ್ಯಾರ್ಥಿಗಳು ಏಕಕಾಲದಲ್ಲಿ ಶಾಲೆಗಳಲ್ಲಿ ಓದುತ್ತಿದ್ದಾರೆ ಎಂದು ಸ್ಮರಿಸಿದರು.

[t4b-ticker]
error: Content is protected !!