ರಾಜ್ಯದ್ಯಂತ ನಾಳೆ SSLC ಪರೀಕ್ಷೆ ಆರಂಭ

Picture of Savistara

Savistara

Bureau Report

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21ರಿಂದ ಆರಂಭವಾಗಲಿದ್ದು, 2,818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ರಾಜ್ಯದ 15,881 ಪ್ರೌಢಶಾಲೆಗಳ 4.61 ಲಕ್ಷ ಬಾಲಕರು, 4.34 ಲಕ್ಷ ಬಾಲಕಿಯರು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದಾರೆ.

ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ ಪರೀಕ್ಷೆಗಳು ಬೆಳಿಗ್ಗೆ 10ರಿಂದ 1.15ರವರೆಗೆ ನಡೆಯಲಿವೆ. ನಕಲು ತಡೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ವೆಬ್‌ಕಾಸ್ಟಿಂಗ್‌ ಅಳವಡಿಸಲಾಗಿದೆ. ಹೊರಗೆ ಸಿ.ಸಿ.ಟಿ.ವಿ ಕಣ್ಗಾವಲು ಇರಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:ಮಾರ್ಚ್‌ 21-ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ, 24-ಗಣಿತ, 26-ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ, 29-ಸಮಾಜ ವಿಜ್ಞಾನ, ಏಪ್ರಿಲ್‌ 1-ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು, 2-ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 4-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್‌ ವಿಷಯಗಳು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!