ರಾಜಧಾನಿಯಲ್ಲಿ 1 ಗಂಟೆವರೆಗೆ ಪಬ್ ತೆರೆಯುವ ಸಂಬಂಧ ಚರ್ಚಿಸಿ ತೀರ್ಮಾನ : ಡಿ ಕೆ ಶಿವಕುಮಾರ್

Picture of Savistara

Savistara

Bureau Report

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರು : ಅಂತಾರಾಷ್ಟ್ರೀಯ ನಗರವಾಗಿರುವ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೆ ಪಬ್ ತೆರೆಯುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.ನಿಗದಿತ ಅವಧಿ ಮೀರಿ ನಗರದಲ್ಲಿ ಪಬ್​​ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇವುಗಳ ವಿರುದ್ಧ ಸರ್ಕಾರ ಕೈಗೊಂಡ ಕ್ರಮಗಳ ಕುರಿತಂತೆ ಬಿಜೆಪಿಯ ಹೆಚ್. ಎಸ್ ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ, ಬೆಂಗಳೂರು ನಗರದಲ್ಲಿ ಪಬ್ ಬೆಳಗ್ಗೆ 10.30ರಿಂದ ರಾತ್ರಿ 11.30ರ ವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದರು.ಈ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗೋಪಿನಾಥ್, ನಗರದಲ್ಲಿ ನಿಗದಿತ ಅವಧಿ ಮೀರಿ ಪಬ್​​ಗಳು ಕಾರ್ಯಾಚರಣೆ ನಡೆಸುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಇದರ ಬದಲಾಗಿ ಕಾರ್ಯಾಚರಣೆ ಅವಧಿ ವಿಸ್ತರಿಸುವಂತೆ ಮನವಿ ಮಾಡಿದರು.

ಅಬಕಾರಿ ಸಚಿವರ ಪರವಾಗಿ ಮಾತನಾಡಿದ ಡಿಕೆಶಿ, ಅವಧಿ ವಿಸ್ತರಣೆ ಮಾಡಬೇಕಾದ ಅಗತ್ಯವಿದೆ. ಬೆಂಗಳೂರು ಇಂಟರ್ ನ್ಯಾಷನಲ್ ಸಿಟಿಯಾಗಿದೆ. ನಗರವನ್ನು ಸದಾ ಚಟುವಟಿಕೆಯಿಂದ ಇರಿಸುವಂತೆ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ಹೀಗಾಗಿ ಗೃಹ ಸಚಿವರು ಹಾಗೂ ಅಬಕಾರಿ ಇಲಾಖೆ ಸಚಿವರ ಜೊತೆ ಚರ್ಚಿಸಿ, ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!