ಸೌಜನ್ಯ ಕೊಲೆ ಪ್ರಕರಣ ; ಕನ್ನಡ ಯೂಟ್ಯೂಬ್ ಜಗತ್ತಿನಲ್ಲಿ ಸಂಚಲನ ಸೃಷ್ಟಿಸಿದ್ದ ಸಮೀರ್ ವಿಡಿಯೋ ಡಿಲೀಟ್ | ಕೋರ್ಟ್ ಆದೇಶ

Picture of Savistara

Savistara

Bureau Report

ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಎಂ.ಡಿ. ಸಮೀರ್ ಎಂಬವರು ದೂತ ಹೆಸರಿನ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿದ್ದ ವಿಡಿಯೋವನ್ನು ತೆಗೆಯುವಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು, ಮಾ.21 : ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಎಂ.ಡಿ. ಸಮೀರ್ ಎಂಬವರು ದೂತ ಹೆಸರಿನ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿದ್ದ ವಿಡಿಯೋವನ್ನು ತೆಗೆಯುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್.ಸುಕೇಶ್ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.ಅಲ್ಲದೆ, ಪ್ರತಿವಾದಿ ಎಂ.ಡಿ.ಸಮೀರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬಸ್ಥರ ವಿರುದ್ಧವಾಗಿ ಯಾವುದೇ ಮಾದರಿಯಲ್ಲಿ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, “ಸಮೀರ್ ಮಾಡಿರುವ ವಿಡಿಯೋಗೆ ಅರ್ಜಿದಾರರ ವಿರುದ್ಧವಾಗಿರುವವರು ಪ್ರಾಯೋಜಕತ್ವ ವಹಿಸಿದ್ದಾರೆ. ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಲಭ್ಯವಿದ್ದರೂ ಸಂವಿಧಾನದ 19(2)ನೇ ವಿಧಿಯಡಿ ಈ ಸ್ವಾತಂತ್ರ್ಯ ಪರಿಪೂರ್ಣವಲ್ಲ. ಸಕಾರಣಗಳಿದ್ದಾಗ ಅದರ ಮೇಲೆ ನಿರ್ಬಂಧ ವಿಧಿಸಬಹುದಾಗಿದ್ದು, ಮಾನಹಾನಿಯಂತಹ ಸಂದರ್ಭದಲ್ಲಿ ನಿರ್ಬಂಧ ಮಾಡಬಹುದಾಗಿದೆ. ಸಮೀರ್ ವಿಡಿಯೋದಲ್ಲಿನ ವಿಷಯವು ಸುಳ್ಳಾಗಿದ್ದು, ಅದು ಮಾನಹಾನಿ ಆಗುವ ರೀತಿಯಿದೆ ಎಂದು ಆಕ್ಷೇಪಿಸಿದ್ದರು.ವಿಡಿಯೋ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲಿಸಿ, ನೋಟಿಸ್‌ ಜಾರಿ ಮಾಡಿದ್ದರು. ಬಳಿಕ ಪೊಲೀಸ್ ನೋಟಿಸ್ ಮತ್ತು ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿತ್ತು. ಈ ನಡುವೆ, ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾಗೆ ನ್ಯಾಯ ಒದಗಿಸುವ ಹೆಸರಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ನಿರಾಕರಿಸಿದ್ದ ಸರ್ಕಾರದ ಕ್ರಮವನ್ನು ພ໖, ಪ್ರತಿಭಟನೆಗೆ ಹೈಕೋರ್ಟ್ ಅನುಮತಿಸಿತ್ತು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!