ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಲಿ ಆರೆಸ್ಸೆಸ್ ಹಸ್ತಕ್ಷೇಪ ಇಲ್ಲ: ಅರುಣ್ ಕುಮಾರ್

Picture of Savistara

Savistara

Bureau Report

ಅಧ್ಯಕ್ಷರ ಆಯ್ಕೆ ಬಿಜೆಪಿಯ ಆಂತರಿಕ ವಿಚಾರ ಸಹ ಸರಕಾರ್ಯವಾಹ ಅರುಣ್ ಕುಮಾರ್ ಸ್ಪಷ್ಟನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್ ಎಸ್) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆ‌ರ್ ಎಸ್‌ಎಸ್‌ನ ಸಹ ಸರಕಾರ್ಯವಾಹ ಅರುಣ್ ಕುಮಾ‌ರ್ ತಿಳಿಸಿದ್ದಾರೆ.ಮಾಗಡಿ ಚನ್ನೇನಹಳ್ಳಿಯ ರಸ್ತೆಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಶನಿವಾರನಡೆದಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಆ‌ರ್ ಎಸ್‌ಎಸ್‌ ರಾಷ್ಟ್ರದ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ಸ್ವತಂತ್ರ ಪಕ್ಷವಾಗಿದ್ದು, ಅಧ್ಯಕ್ಷರ ಆಯ್ಕೆ ವಿಚಾರ ಆ ಪಕ್ಷದ ಆಂತರಿಕ ವಿಚಾರವಾಗಿದೆ. ಪಕ್ಷದಲ್ಲಿ ಎಲ್ಲದ್ದಕ್ಕೂ ಒಂದು ವ್ಯವಸ್ಥಿತ ಪ್ರಕ್ರಿಯೆ ಇರುತ್ತದೆ. ಆ ಪ್ರಕಾರ ಸೂಕ್ತ ಸಮಯದಲ್ಲಿ ಪಕ್ಷ ನಿರ್ಣಯ ಕೈಗೊಳ್ಳಲಿದೆ. ಪಕ್ಷವು ಸಂಘದ ಸಲಹೆ ಕೇಳಿದರೆ, ಸಲಹೆ ನೀಡುವುದಾಗಿ ಹೇಳಿದರು.ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ

ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಸಂಬಂಧ ಕೇಂದ್ರದಿಂದ ನಿರ್ದಿಷ್ಟ ಅಧಿಸೂಚನೆ ಅಥವಾ ಮಾರ್ಗಸೂಚಿ ಹೊರಬಿದ್ದಿಲ್ಲ. ಆದರೂ ಚರ್ಚೆಗಳು ನಡೆಯುತ್ತಿವೆ. ಇದೊಂದು ರಾಜಕೀಯ ಅಜೆಂಡಾದಂತೆ ಕಾಣುತ್ತಿದೆ. ಈ ವಿಚಾರದಲ್ಲಿ ಪ್ರತಿಕ್ರಿಯಿಸುವ ಎಂದರು. ಸಂಘವು ಅಗತ್ಯವಿಲ್ಲರಾಜ್ಯಗಳ ಗಡಿ ಪ್ರದೇಶದ ಭಾಷಾ ಸಮಸ್ಯೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಲ್ಲಿ ದೇಶ ಮೊದಲು. ಸಂವಿಧಾನದ ಪೀಠಿಕೆಯಲ್ಲಿ ಸಹ ನಾವು ಭಾರತೀಯರು ಎಂದಿದೆ. ಹೀಗಾಗಿ ದೇಶದಲ್ಲಿರುವ ನಾವೆಲ್ಲ ಒಂದು ಎಂಬ ಭಾವನೆ ಇರಬೇಕು. ಭಾರತವು ವಿವಿಧ ಧರ್ಮ, ಭಾಷೆ, ಮತ, ಪಂಥ, ಸಂಸ್ಕೃತಿ ಸೇರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ವಿವಿಧತೆಯಲ್ಲಿ ಏಕತೆ ಇರುವ ದೇಶ ಭಾರತ. ಇದನ್ನು ಅರ್ಥ ಮಾಡಿಕೊಂಡರೆ, ಗಡಿ-ಭಾಷೆ ಸಮಸ್ಯೆಗಳು ಇರುವುದಿಲ್ಲ ಎಂದು ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!