ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಉಪಸಭಾಪತಿಗೆ ಪತ್ರ ರವಾನೆ

Picture of Savistara

Savistara

Bureau Report

ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ.ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್ 31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ನನ್ನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಬೇಕು ಎಂದು ಉಪಸಭಾಪತಿಗೆ ಬರೆದ ಪತ್ರದಲ್ಲಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ್ದ ಬಸವರಾಜ ಹೊರಟ್ಟಿ, ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸ್ಸಿಗೆ ಬೇಸರ ತಂದಿದೆ. ಸದನದಲ್ಲಿ ನಡೆದ ಬೆಳೆವಣಿಗೆಯನ್ನು ನಿಯಂತ್ರಿಸುವಲ್ಲಿ ನಾನು ವಿಫಲನಾಗಿದ್ದೇನೆ. ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂದು ಹೇಳಿಕೊಂಡಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!