ಅಮಿತ್ ಶಾ ಭೇಟಿಯಾದ ಕೆ.ಪಳನಿಸ್ವಾಮಿ: ತಮಿಳುನಾಡಿನಲ್ಲಿ ಬಿಜೆಪಿ, ಎಐಎಡಿಎಂಕೆ ಮೈತ್ರಿ ನಿರೀಕ್ಷೆ

Picture of Savistara

Savistara

Bureau Report

ನವದೆಹಲಿ: ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಜೊತೆಗಿನ ಮೈತ್ರಿಯನ್ನು ಎಐಎಡಿಎಂಕೆ ಪಕ್ಷ ಪುನರುಜ್ಜೀವನಗೊಳಿಸುವ ಸಾಧ್ಯತೆ ಇದೆ ಎಂಬ ಉಹಾಪೋಹಗಳು ನಡುವೆಯೇ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಎಐಎಡಿಎಂಕೆ ನಾಯಕರು ಶಾ ಅವರೊಂದಿಗೆ ಚರ್ಚಿಸಿದರು ಮತ್ತು ಅವರ ಪಕ್ಷದ ಅಭಿಪ್ರಾಯಗಳನ್ನು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ, 2024 ರ ಲೋಕಸಭಾ ಚುನಾವಣೆಗೆ ಮುನ್ನ ಕೇಸರಿ ಪಕ್ಷದ ರಾಜ್ಯ ನಾಯಕತ್ವದೊಂದಿಗಿನ ಕೆಲವು ಭಿನ್ನಾಭಿಪ್ರಾಯಗಳ ನಂತರ ಸೆಪ್ಟೆಂಬರ್ 2023 ರಲ್ಲಿ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿತು. ಹಿರಿಯ ಎಐಎಡಿಎಂಕೆ ನಾಯಕರು ಬಿಜೆಪಿ ಮುಖ್ಯಸ್ಥ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಆಕ್ರಮಣಕಾರಿ ರಾಜಕೀಯ ಶೈಲಿಯಿಂದ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಅವರಿಗೆ ತಿಳಿಸಿದ ಮೈತ್ರಿಯನ್ನು ಕಡಿದುಕೊಂಡಿದ್ದರು.ದ್ರಾವಿಡ ನಾಯಕ ಸಿ ಎನ್ ಅಣ್ಣಾದೊರೈ ಅವರ ಬಗ್ಗೆ ಕೆ ಅಣ್ಣಾಮಲೈ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕು ಅಥವಾ ಅವರನ್ನು ಬದಲಾಯಿಸಬೇಕು ಎಂದು ಎಐಎಡಿಎಂಕೆ ನಾಯಕರು ಒತ್ತಾಯಿಸಿದ್ದರು. ಆದರೆ ಅಣ್ಣಾಮಲೈ ಇದಕ್ಕೆ ಒಪ್ಪಿರಲಿಲ್ಲ.ಕೆ ಅಣ್ಣಾಮಲೈ ಈಗ ಸ್ವಲ್ಪ ಸಮಯದಿಂದ ಎಐಎಡಿಎಂಕೆ ಮೇಲಿನ ಟೀಕೆಗಳನ್ನು ಕಡಿಮೆ ಮಾಡಿದ್ದಾರೆ.ಎಐಎಡಿಎಂಕೆ ಮತ್ತು ಬಿಜೆಪಿ ತಮ್ಮ ಮೈತ್ರಿಯನ್ನು ಪುನರುಜ್ಜೀವನಗೊಳಿಸಿದರೆ, ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ ಇಂಡಿ ಬಣಕ್ಕೆ ಬಲವಾದ ಸವಾಲು ಒಡ್ಡುತ್ತಾರೆ ಎಂಬ ಅಭಿಪ್ರಾಯವಿದೆ. ಆದರೆ ಎಐಎಡಿಎಂಕೆ ಕಳೆದ ಕೆಲವು ವರ್ಷಗಳಿಂದ ತನ್ನ ಮತ ಹಂಚಿಕೆಯಲ್ಲಿ ಕುಸಿತ ಕಂಡಿದೆ ಎಂಬುದೂ ನಿಜ.

[t4b-ticker]
error: Content is protected !!