ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ! ಬಿ.ವೈ. ವಿಜಯೇಂದ್ರ ಮೊದಲ ಪ್ರತಿಕ್ರಿಯೆ

Picture of Savistara

Savistara

Bureau Report

ಪಕ್ಷದ ಶಿಸ್ತು ಉಲ್ಲಂಘನೆಯ ಕಾರಣಕ್ಕೆ ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದ ಹೈಕಮಾಂಡ್ ಇಂದು ಆರು ವರ್ಷದ ಅವಧಿಗೆ ಉಚ್ಚಾಟನೆ ಮಾಡಿದೆ.

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆಯ ಕಾರಣಕ್ಕೆ ಬಿಜೆಪಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದ ಹೈಕಮಾಂಡ್ ಇಂದು ಆರು ವರ್ಷದ ಅವಧಿಗೆ ಉಚ್ಛಾಟನೆ ಮಾಡಿದೆ.

ಯತ್ನಾಳ ಅವರ ಉಚ್ಛಾಟನೆ ಘೋಷಣೆಯಾಗುತ್ತಿದ್ದಂತೆಯೇ ಎಕ್ಸ್ ಖಾತೆಯಲ್ಲಿ ಸುಧೀರ್ಘ ಪೋಸ್ಟ್ ಒಂದನ್ನು ಬಿಜೆಪಿ ರಾಜ್ಯದಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹಂಚಿಕೊಂಡಿದ್ದಾರೆ.’ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.’ಭಾರತೀಯ ಜನತಾ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ’ ಎಂದಿದ್ದಾರೆ.

‘ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ’ ಎಂದಿದ್ದಾರೆ.“ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.’ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!