ರಾಜ್ಯದ 14 ದೇವಾಲಯಗಳಿಂದ ಪ್ರಸಾದ ಭಕ್ತರ ಮನೆಗಳಿಗೆ ತಲುಪಿಸುವ – ಇ-ಪ್ರಸಾದ ಸೇವೆಗೆ ಚಾಲನೆ

Picture of Savistara

Savistara

Bureau Report

ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಪ್ರಸಾದವನ್ನು ಮನೆಬಾಗಿಲಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಹಿತ ರಾಜ್ಯದ 14 ದೇವಾಲಯಗಳನ್ನು ಆಯ್ಕೆ ಮಾಡಿ ಪ್ರಾಯೋಗಿಕ ಪ್ರಸಾದ ಸೇವೆಗೆ ಚಾಲನೆ ನೀಡಲಾಗಿದೆ.ಮುಜರಾಯಿ ಇಲಾಖೆಯ ಪ್ರಮುಖ ದೇವಾ ಲಯಗಳ ಪ್ರಸಾದವನ್ನು ಭಕ್ತರ ಮನೆಬಾಗಿಲಿಗೆ ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸ್ ಇಂಡಿಯಾ ಲಿಮಿಟೆಡ್ CSC e-Governance Services India Limited ಸಹಯೋಗದೊಂದಿಗ ಅನುಷ್ಠಾನಗೊಳಿಸಿ ಜಾರಿಗೆ ತರಲಾಗುತ್ತಿದೆ. ಈ ದೇವಾಲಯಗಳಲ್ಲಿ ಕಲ್ಲುಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಕುಂಕುಮ, ಬಿಲ್ವಪತ್ರೆ, ಹೂವು, ತುಳಸಿ ಮತ್ತು ದೇವಾಲಯದ ಸ್ತೋತ್ರ ಗಳನ್ನು ತರಿಸಿಕೊಳ್ಳಬಹುದು.*ಪ್ರಸಾದ ತರಿಸಿಕೊಳ್ಳಬಹುದಾದ ದೇವಾಲಯಗಳು*• ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ದಕ್ಷಿಣ ಕನ್ನಡ• ಶ್ರೀ ವಿನಾಯಕಸ್ವಾಮಿ ದೇವಾಲಯ ಜಯನಗರ, ಬೆಂಗಳೂರು.• ಶ್ರೀ ಚಲುವನಾರಾಯಣಸ್ವಾಮಿ ದೇವಸ್ಥಾನ, ಮಂಡ್ಯ ಜಿಲ್ಲೆ• ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನ, ನಂಜನಗೂಡು, ಮೈಸೂರು,• ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ ಮಾಲೂರು, ಕೋಲಾರ ಜಿಲ್ಲೆ.• ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ, ಹಲಸೂರು, ಬೆಂಗಳೂರು,• ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು, ಉಡುಪಿ ಜಿಲ್ಲೆ,• ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನ, ಗವಿಪುರ, ಬೆಂಗಳೂರು• ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನ, ಬೀದರ್• ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ, ಸವದತಿ, ಬೆಳಗಾವಿ• ಶ್ರೀ ಕನಕದುರ್ಗಮ್ಮ ದೇವಸ್ಥಾನ, ಬಳ್ಳಾರಿ• ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ, ವಿಜಯನಗರ ಜಿಲ್ಲೆ• ಶ್ರೀ ಹುಲಿಗೆಮ್ಮ ದೇವಾಲಯ, ಕೊಪ್ಪಳ• ಶ್ರೀ ಗುರುದತ್ತಾತ್ರೇಯ ಸ್ವಾಮಿ ದೇವಸ್ಥಾನ, ಕಲಬುರಗಿ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!