ಕರಾವಳಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ

Picture of Savistara

Savistara

Bureau Report

ಮಾರ್ಚ್ ತಿಂಗಳ ಕೊನೆಯ ಎರಡು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಾ.31 ಮತ್ತು ಎ.1 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ “ಎಲ್ಲೋ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಈ ವೇಳೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ.ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು, ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ.ರಾಜ್ಯದ ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!