ಸರ್ಕಾರ ಯಾವುದನ್ನೂ ಉಚಿತವಾಗಿ ನೀಡಬಾರದು, ಉಚಿತ ಎನ್ನುವುದೇ ಅಪಾಯಕಾರಿ: ಆರ್.ವಿ.ದೇಶಪಾಂಡೆ

Picture of Savistara

Savistara

Bureau Report

ಕಾರವಾರ: ಸರ್ಕಾರವು ಯಾವುದನ್ನೂ ಉಚಿತವಾಗಿ ನೀಡಬಾರದು. ಏನೇ ನೀಡಿದರೂ ಅದಕ್ಕೆ ಹಣ ನಿಗದಿಯಾಗಬೇಕು. ಉಚಿತ ಎನ್ನುವುದೇ ಅಪಾಯಕಾರಿ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಳಿಯಾಳ (Haliyala) ಶಾಸಕ ಆರ್.ವಿ.ದೇಶಪಾಂಡೆ (R V Deshpande) ಹೇಳಿದರು.

ದಾಂಡೇಲಿಯಲ್ಲಿ (Dandeli) ಪ್ರಾದೇಶಿಕ ಸಾರಿಗೆ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಅದರ ಲಾಭ ಪಡೆದುಕೊಂಡಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ (Free Bus) ಸೇವೆ ನೀಡಿದಂತೆ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದರು.

ಎಲ್ಲರಿಗೂ ಉಚಿತವಾಗಿ ನೀಡುತ್ತಾ ಹೋದರೆ ಸಾರಿಗೆ ಸಂಸ್ಥೆ ನಡೆಸುವುದು ಕಷ್ಟವಾಗಬಹುದು. ಮುಂದೆ ಉಚಿತ ಯೋಜನೆ ಅಪಾಯಕಾರಿಯಾಗಬಹುದು. ಉಚಿತ ಯೋಜನೆಗಳನ್ನ ಉಳ್ಳವರು ಬಳಸಬಾರದು ಎಂದು ಹೇಳಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!