ಶಾಲಾ ಪ್ರವೇಶ ವಯೋಮಿತಿ । ವರದಿ ನಂತರ ನಿರ್ಧಾರ: ಸಚಿವ ಮಧು ಬಂಗಾರಪ್ಪ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸಿನಆಧಾರದಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತು ನಿರ್ಧರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಿಂದ ಆರು ವರ್ಷ ಕಡ್ಡಾಯಗೊಳಿಸಲಾಗಿದೆ. ವಯೋಮಿತಿ ಸಡಿಲಿಸುವಂತೆ ಹಲವು ಪೋಷಕರು ಮನವಿ ಮಾಡಿದ್ದಾರೆ. ರಾಜ್ಯ ಶಿಕ್ಷಣ ನೀತಿ ಆಯೋಗ ವರದಿ ನೀಡಿದ ನಂತರ ಮುಖ್ಯಮಂತ್ರಿ ಜತೆ ಚರ್ಚಿಸಿ, ಖಚಿತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.ಹಿಂದಿನ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಭಾಗವಾಗಿ ಶಾಲಾ ಪ್ರವೇಶದ ವಯೋಮಿತಿಯನ್ನು ಆರು ವರ್ಷಕ್ಕೆ ನಿಗದಿ ಮಾಡಿತ್ತು. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎನ್‌ಇಪಿ ರದ್ದು ಮಾಡಲು ಕ್ರಮ ಕೈಗೊಂಡಿದೆ. ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ರೂಪಿಸಲು ಆಯೋಗ ರಚಿಸಿದೆ. ಪೋಷಕರ ವಿನಂತಿಯನ್ನು ಆಯೋಗದ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!