ನಾಗ್ಪುರ RSS ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಸಂಸ್ಥಾಪಕರಿಗೆ ನಮನ

Picture of Savistara

Savistara

Bureau Report

ನಾಗ್ಪುರ : ಪ್ರಧಾನಿ ನರೇಂದ್ರ ಮೋದಿಯ ಇಲ್ಲಿನ ರೇಶಿಮ್ಭಾಗ್‌ನಲ್ಲಿರುವ ಡಾ. ಹೆಡಗೇವಾ‌ರ್ ಸ್ಮೃತಿ ಮಂದಿರಕ್ಕೆ(ಆರ್‌ಎಸ್‌ಎಸ್‌ ಕಚೇರಿ) ಭೇಟಿ ನೀಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ಹಾಗೂ ಎರಡನೇ ಸರಸಂಘ ಸಂಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದೇ ವೇಳೆ ಇದ್ದರು.ಸ್ಮಾರಕದಲ್ಲಿರುವ ಸ್ಮೃತಿ ಭವನದಲ್ಲಿರುವ ಆರ್‌ಎಸ್‌ಎಸ್‌ನ ಕಚೇರಿ ಸಿಬ್ಬಂದಿಯನ್ನು ಭೇಟಿಯಾಗಿ ಅವರೊಂದಿಗೆ ಫೋಟೊ ತೆಗೆಸಿಕೊಂಡರು.

ಪ್ರಧಾನಿಯಾದ ಬಳಿಕ ಮೋದಿಯವರು ಇಲ್ಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಹಿಂದೆ 2000 ಆಗಸ್ಟ್ 27ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಡಾ. ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದರು.

ನಾಗುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯನ್ನು ಮುಖ್ಯಮಂತ್ರಿ ಫಡಣವೀಸ್, ಕೇಂದ್ರ ಸಚಿವ ಗಡ್ಕರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖ‌ರ್ ಬವಾಂಕುಲೆ ಬರ ಮಾಡಿಕೊಂಡರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!