ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

Picture of Savistara

Savistara

Bureau Report


ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಿವಾದಿತ ವಕ್ಸ್‌ ತಿದ್ದುಪಡಿ ಮಸೂದೆಯನ್ನು ಮಂಡಿಸಿರುವುದನ್ನು ವಿರೋಧಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಇಂದು ನಗರದ ಕ್ಲಾಕ್ ಟವ‌ರ್ ವೃತ್ತದಲ್ಲಿ ದಿಢೀ‌ರ್ ಪ್ರತಿಭಟನೆ ನಡೆಸಿದರು.

ಮಂಗಳೂರು: ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಿವಾದಿತ ವಕ್ಷೆ ತಿದ್ದುಪಡಿ ಮಸೂದೆಯನ್ನು ಮಂಡಿಸಿರುವುದನ್ನು ವಿರೋಧಿಸಿ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಇಂದು ನಗರದ ಕ್ಲಾಕ್ ಟವ‌ರ್ ವೃತ್ತದಲ್ಲಿ ದಿಢೀ‌ರ್ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಈ ನಡೆಯನ್ನು ‘ಏಕಪಕ್ಷೀಯ ಮತ್ತು ‘ಅಸಂವಿಧಾನಿಕ’ ಎಂದು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಮುಸ್ಲಿಮರ ವಕ್ಸ್ ಆಸ್ತಿಯನ್ನು ಕಬಳಿಸಲು ಕೇಂದ್ರ ಸರ್ಕಾರವು ಹುನ್ನಾರ ನಡೆಸಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು.

“ಯಾವುದೇ ಕಾರಣಕ್ಕೂ ವಕ್ಸ್‌ ಆಸ್ತಿಯನ್ನು ಬಿಟ್ಟುಕೊಡುವುದಿಲ್ಲ. ನಮ್ಮ ಪ್ರಾಣವನ್ನು ಕೊಟ್ಟಾದರೂ ವಕ್ಸ್ ಆಸ್ತಿಯನ್ನು ರಕ್ಷಿಸುತ್ತೇವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಏಕಾಏಕಿ ನಡೆದ ಪ್ರತಿಭಟನೆಯಿಂದಾಗಿ ಕ್ಲಾಕ್ ಟವ‌ರ್ ವೃತ್ತದ ಬಳಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೇಂದ್ರ ಸರ್ಕಾರವು ವಕ್ಸ್‌ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಇಂದು ಮಂಡಿಸಿತ್ತು. ಈ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದಾಗ ಪರ ವಿರೋಧದ ಚರ್ಚೆಗಳು ನಡೆದಿದ್ದವು. ವಕ್ಸ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವುದು, ಅಕ್ರಮಗಳನ್ನು ತಡೆಯುವುದು ಹಾಗೂ ಆಸ್ತಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದನ್ನು ಖಚಿತಪಡಿಸುವುದು ಸರ್ಕಾರದ ಉದ್ದೇಶವೆಂದು ಪ್ರತಿಪಾದಿಸಲಾಗಿತ್ತು. ಕೆಲವು ನಿಬಂಧನೆಗಳನ್ನು ಸರಳೀಕರಣಗೊಳಿಸುವ ಮತ್ತು ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಸಹ ಉಲ್ಲೇಖಿಸಲಾಗಿತ್ತು.

ಆದರೆ, ವಿರೋಧ ಪಕ್ಷಗಳು ಮತ್ತು ಕೆಲವು ಸಮುದಾಯದ ಪ್ರತಿನಿಧಿಗಳು ಈ ತಿದ್ದುಪಡಿಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಇದು ವಕ್ಸ್ ಮಂಡಳಿಗಳ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ, ವಕ್ಸ್ ಆಸ್ತಿಗಳ ಮೇಲಿನ ಹಕ್ಕನ್ನು ದುರ್ಬಲಗೊಳಿಸುತ್ತದೆ ಮತ್ತು ಆಸ್ತಿಗಳನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅಥವಾ ಕಬಳಿಸಲು ದಾರಿ ಮಾಡಿಕೊಡಬಹುದು ಎಂದು ವಾದಿಸಿದ್ದರು. ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಇದು ಪರಿಣಾಮ ಬೀರಲಿದೆ ಎಂಬ ಕಳವಳಗಳೂ ವ್ಯಕ್ತವಾಗಿದ್ದವು.

[t4b-ticker]
error: Content is protected !!