ಸುಳ್ಯ ಸರಕಾರಿ ಆಸ್ಪತ್ರೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಉಲ್ಲಂಘನೆ | ಆರೋಗ್ಯಾಧಿಕಾರಿಗೆ ಡಿ.ಎಚ್‌.ಒ.ರಿಂದ ಶೋಕಾಸ್ ನೋಟೀಸ್

Picture of Savistara

Savistara

Bureau Report

” ಸರಕಾರಿ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಪಾಲನೆ ಕಡ್ಡಾಯವಾಗಿದ್ದು ಅಧಿಕಾರಿಗಳು ಇದನ್ನು ಪಾಲಿಸಬೇಕು. ಆದರೆ ಇದನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಕಾರ್ಯಕ್ರಮ ಒಂದಕ್ಕೆ ಸಂಬಂಧಪಟ್ಟ ಅಧಿಕಾರಿಯವರು ಪಾಲಿಸಿಲ್ಲ” ಎಂದು ಆರೋಪಿಸಿ ಸುಳ್ಯ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಯವರು ಸುಳ್ಯ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಗೆ ಶೋಕಾಸ್ ನೋಟಿಸ್‌ ಜಾರಿಗೊಳಿಸಿದ ಘಟನೆ ವರದಿಯಾಗಿದೆ.ಎ.5ರಂದು ಸುಳ್ಯ ಸರಕಾರಿ ಆಸ್ಪತ್ರೆಯ ಕಣ್ಣಿನ ಶಸ್ತ್ರ ಚಿಕಿತ್ಸಾ ಘಟಕಕ್ಕೆ ಸಂಬಂಧಿಸಿದ ಯಂತ್ರ ಒಂದರ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಸರಕಾರದಿಂದ ನೇಮಕಗೊಂಡ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಇಲ್ಲದೇ ಇದ್ದು ಪ್ರೊಟೊಕಾಲ್‌ ಪಾಲಿಸಿಲ್ಲ ಎಂದು ಸುಳ್ಯ ಕಾಂಗ್ರೆಸ್ ನ ಮುಖಂಡರುಗಳು ಅಸಮಾಧಾನಗೊಂಡಿದ್ದರು.

ಈ ಬಗ್ಗೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಹಮೀದ್ ಕುತ್ತಮೊಟ್ಟೆಯವರು ಪ್ರತಿಭಟನೆಯ ಪ್ರಕಟಣೆಯನ್ನು ನೀಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ರವಾನಿಸಿದ್ದರು.

ಇದೀಗ ಈ ಬಗ್ಗೆ ಬಂದ ಮಾಹಿತಿಯಂತೆ ಆಮಂತ್ರಣ ಪತ್ರದಲ್ಲಿ ಆಗಿರುವ ತಪ್ಪಿಗೆ ಕಾರಣ ಕೇಳಿ ಜಿಲ್ಲಾ ವೈದ್ಯಾಧಿಕಾರಿಯವರಿಂದ ಸುಳ್ಯ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರಿಗೆ ನೋಟಿಸ್‌ ಬಂದಿರುತ್ತದೆ ಎಂದು ತಿಳಿದು ಬಂದಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!