ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮ

Picture of Savistara

Savistara

Bureau Report

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಎ.4 ರಿಂದ ಎ.10 ರ ವರೆಗೆ ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಿಬಿರವು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ತಿಳಿಸಿದರು. ಕಾಲೇಜಿನ ರಕ್ಷಕ ಶಿಕ್ಷಕರ ಸಂಘದ ಅಧ್ಯಕ್ಷೆ ಶ್ರೀಮತಿ ಸಾಯಿಗೀತ ಕೂಜುಗೋಡು, ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಸಾಲ್ತಾಡಿ, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರಿನ ಎಸ್‌.ಡಿ.ಎಂ.ಸಿ ಸದಸ್ಯ ಶ್ರೀ ಸುಧೀರ್ ಅಮೆ , ಕಾರ್ಯಾಧ್ಯಕ್ಷ ಶ್ರೀ ಕೇಶವ ಗೌಡ ಕಾಂತಿಲ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೆ ಎಸ್ ಎಸ್ ಕಾಲೇಜಿನ ಎನ್ ಎಸ್. ಎಸ್ ಕಾರ್ಯಕ್ರಮಾಧಿಕಾರಿ ಆರತಿ.ಕೆ ಸ್ವಾಗತಿಸಿ, ಗುತ್ತಿಗಾರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ವಂದಿಸಿದರು. ಜೀವಿತ್ ಕಾರ್ಯಕ್ರಮ ನಿರೂಪಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!