ಮೇ.11ರಂದು ಸುಬ್ರಹ್ಮಣ್ಯ, ಕನಕಮಜಲು ಗ್ರಾ.ಪಂ. ತೆರವಾದ ಸ್ಥಾನಗಳಿಗೆ ಉಪಚುನಾವಣೆ : ಮೇ.14ರಂದು ಮತ ಎಣಿಕೆ

Picture of Savistara

Savistara

Bureau Report

ಸುಳ್ಯ ತಾಲೂಕಿನ ಕನಕಮಜಲು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗಳಲ್ಲಿ ತೆರವಾದ ಸ್ಥಾನಗಳಿಗೆ ಮೇ.11ರಂದು ಚುನಾವಣೆ ನಡೆಯಲಿದೆ.ಈ ಕುರಿತು ಜಿಲ್ಲಾಧಿಕಾರಿಗಳು ಎ.22ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಎ.28 ಕೊನೆಯ ದಿನವಾಗಿದೆ. ಎ.29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮೇ.2 ಕಡೆಯ ದಿನವಾಗಿದೆ. ಮೇ.11ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡಯಲಿದೆ. ಮೇ.14ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯುವುದು.ಸುಬ್ರಹ್ಮಣ್ಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಶ್ರೀಮತಿ ಭಾರತಿಯವರು ಗ್ರಾ.ಪಂ. ಸಾಮಾನ್ಯ ಸಭೆಗಳಿಗೆ ನಿರಂತರ ಹಾಜರಾಗದೇ ಇದ್ದುದರಿಂದ ಅವರ ಸದಸ್ಯ ಸ್ಥಾನ ರದ್ದಾಗಿತ್ತು.

ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ರವಿಚಂದ್ರ ಕಾಪಿಲರವರು ಅನಾರೋಗ್ಯದಿಂದ ನಿಧನರಾದ ಬಳಿಕ ಸದಸ್ಯ ಸ್ಥಾನ ತೆರವಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!