ವಕ್ಫ್ ಮಸೂದೆ ಸಂವಿಧಾನ ವಿರೋಧಿ, ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ: ದಿನೇಶ್ ಗುಂಡೂರಾವ್‌

Picture of Savistara

Savistara

Bureau Report

ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಸ್ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಮಂಗಳೂರಿನಲ್ಲಿ ಶನಿವಾರ (ಎ.05) ಸುದ್ದಿಗಾರರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಮಸೂದೆ ಜಾರಿ ವಿಚಾರದಲ್ಲಿ ವಕ್ಸ್‌ನಲ್ಲಿ ತಪ್ಪಾಗಿದ್ದರೆ ಅಥವಾ ಭೂಮಿದುರುಪಯೋಗ ಆಗಿದ್ದರೆ ಸರಿ, ಆದರೆ ಕಾನೂನಿಗೆ ಅದಕ್ಕೂ ಸಂಬಂಧ ಇಲ್ಲ. ಈ ಕಾನೂನು ಸಂವಿಧಾನ ವಿರೋಧಿಯಾಗಿದೆ. ವಕ್ಸ್ ವಿಚಾರ ಸೂಕ್ಷ್ಮವಾಗಿದ್ದು, ಇದರಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ರಾಜ್ಯದ ಭೂಮಿಯಲ್ಲಿ ಹಿಂದೂ ಧರ್ಮದ ಟ್ರಸ್ಟ್‌ಗಳು ಕೂಡ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಇದೆ. ವಕ್ಸ್ ಕೂಡ ಕೆಲವು ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಇದೆ. ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದರು.

ಕೋವಿಡ್ ಅಕ್ರಮದ ಬಗ್ಗೆ ನ್ಯಾ.ಡಿ.ಕುನ್ನಾ ವರದಿ ಬಗ್ಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಉಪಸಮಿತಿಯಲ್ಲಿ ಚರ್ಚೆಗಳಾಗಿದೆ. ಇಲಾಖೆಗಳಲ್ಲಿ ವಿಚಾರಣೆ ಮಾಡಲು ಹೇಳಿದ್ದೇನೆ. ವಿಚಾರಣೆ ಪೂರ್ಣಗೊಂಡ ಬಳಿಕ ಸ್ಪಷ್ಟ ಚಿತ್ರಣ ಲಭಿಸುತ್ತದೆ. ಕೋವಿಡ್ ಅಕ್ರಮದ ತನಿಖೆಯನ್ನು ಎಸ್‌ಐಟಿಗೂ ವಹಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಶೋಕಾಸ್ ನೊಟೀಸ್ ನೀಡಿ ವಿಚಾರಣೆ ನಡೆಸಲಾಗಿದೆ. ಎಲ್ಲ ವಿಚಾರಣೆ ನಂತರ ಮುಂದಿನ ಕ್ರಮದಬಗ್ಗೆ ಪರಿಶೀಲಿಸಲಾಗುವುದು ಎಂದರು.ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ನನಗೆ ಪೂರ್ತಿ ಮಾಹಿತಿ ಇಲ್ಲ, ಮಾಹಿತಿ ತಿಳಿದು ಪ್ರತಿಕ್ರಿಯೆ ನೀಡುತ್ತೇನೆ. ಯಾವುದೇ ಪ್ರಕರಣ ಕಾನೂನು ಪ್ರಕಾರವೇ ಮುಂದುವರಿಯಬೇಕು. ಎಲ್ಲವನ್ನೂ ಕಾನೂನಿನ ಅಡಿಯಲ್ಲೇ ಮಾಡಬೇಕಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂಥದ್ದು ಏನೂ ಇಲ್ಲ. ಇವೆಲ್ಲಾ ಗಂಭೀರ ಮತ್ತು ಸೂಕ್ಷ್ಮವಾದ ವಿಷಯಗಳು, ಒಂದೇ ಸಮನೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!