ಕ್ಯಾಂಪ್ಕೋ ಸಂಸ್ಥೆಯ ಸತತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಅಸ್ತು | ಹುರಿದ ಅಡಿಕೆ ಅಮದಿಗೆ ತಡೆ ನೀಡಿದ ಕೇಂದ್ರ ಸರ್ಕಾರ

Picture of Savistara

Savistara

Bureau Report

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್ ನಟ್ ಸೀಡ್ಸ್” ಅಡಿಯಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ಯಾಂಪೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಲಿ ಶ್ಲಾಘಿಸಿದ್ದಾರೆ.ಈ ವಿಚಾರವಾಗಿ ಕ್ಯಾಂಪ್ಕೋ ಸಂಸ್ಥೆ ಕೇಂದ್ರ ಸರ್ಕಾರ ಮಟ್ಟದಲ್ಲಿ ಕೇಂದ್ರ ವಾಣಿಜ್ಯ ಮಂತ್ರಿಗಳಿಗೆ ಮನವಿ ಮಾಡಿದ್ದರು.ಎಪ್ರಿಲ್ 2 ರಂದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅದರ ಪ್ರಕಾರ HS code 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆಯನ್ನು “ಉಚಿತ” ಆಮದಿನಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಇದರ ಜೊತೆಗೆ ಕನಿಷ್ಠ ಆಮದು ದರವನ್ನು ಪ್ರತೀ ಕೆಜಿಗೆ ರೂ 351 ನಿಗದಿಪಡಿಸಿದೆ. ಹೀಗಾಗಿ ಈ ಸಂಖ್ಯೆಯಡಿಯಲ್ಲಿಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಠೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದು ಇದೀಗ ಮತ್ತೆ ಅಡಿಕೆ ಧಾರಣೆ ಏರಿಕೆಯಾಗುವ ಸಾಧ್ಯತೆಯಿದೆ.ಈ ವಿಚಾರವಾಗಿ ಕ್ಯಾಂಪ್ಕೋ ಸಂಸ್ಥೆ ಅನೇಕ ದಿನಗಳಿಂದ ಅಧಿಕಾರಿಗಳ ಮಟ್ಟದಲ್ಲಿ ಒತ್ತಡ ತಂದಿರುವ ಪರಿಣಾಮವಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!