ಈ ರಾಜ್ಯದಲ್ಲಿ ಜೂನ್ ಬದಲು ಏಪ್ರಿಲ್​ನಿಂದಲೇ ಹೊಸ ಶೈಕ್ಷಣಿಕ ವರ್ಷ ಆರಂಭ: ಕಾರಣ ಏನು ಗೊತ್ತಾ…?

Picture of Savistara

Savistara

Bureau Report

ಗೋವಾದಲ್ಲಿ ಏಪ್ರಿಲ್​ನಿಂದಲೇ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ.

ಪಣಜಿ (ಗೋವಾ): ಇದೇ ಮೊದಲ ಬಾರಿಗೆ ಗೋವಾದಲ್ಲಿ ಏಪ್ರಿಲ್​ನಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ಹೊಸ ಬದಲಾವಣೆಗೆ ಬಹುತೇಕ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದರೂ, ವಿಪರೀತ ಬಿಸಿಲಿನ ಕಾರಣದಿಂದ ಕೆಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಜೂನ್​​​ 1 ರಿಂದ ಅಲ್ಲ ಏಪ್ರಿಲ್​​ ನಿಂದಲೇ ಶಾಲೆಗಳು ಆರಂಭ; ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ ಸೋಮವಾರದಂದು ರಾಜ್ಯದ ಬಹುತೇಕ ಶಾಲೆಗಳಲ್ಲಿ ಶೇ 90ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇತ್ತು ಎಂದು ಅವರು ತಿಳಿಸಿದರು. ಈ ಮುಂಚೆ ಪ್ರತಿವರ್ಷ ಜೂನ್​ನಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿತ್ತು. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಬದಲಾವಣೆ ಮಾಡಲಾಗಿದೆ. ಗೋವಾ ರಾಜ್ಯದಲ್ಲಿ 5 ರಿಂದ 12ನೇ ತರಗತಿಯ 2,153 ಶಾಲೆಗಳಿವೆ. ಈ ಪೈಕಿ ಸೋಮವಾರದಿಂದ 5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಶಾಲೆಗಳು ಆರಂಭಗೊಂಡಿವೆ.

ಮಕ್ಕಳ ಹಾಜರಾತಿ ಪರಿಶೀಲಿಸಿದ ಶಿಕ್ಷಣ ಕಾರ್ಯದರ್ಶಿ: ಹೊಸ ಶೈಕ್ಷಣಿಕ ವರ್ಷದ ಮೊದಲ ದಿನದಂದು ಹಾಜರಾತಿ ಮತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ತಿಳಿಯಲು ರಾಜ್ಯ ಶಿಕ್ಷಣ ಕಾರ್ಯದರ್ಶಿ ಪ್ರಸಾದ್ ಲೋಲಿಯಂಕರ್ ಬೆಳಗ್ಗೆ ರಾಜಧಾನಿ ಪಣಜಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳ ಅಭಿಪ್ರಾಯ ತಿಳಿದುಕೊಳ್ಳಲು ಮುಂದಾದ ಶಿಕ್ಷಣ ಇಲಾಖೆ; “ಶೈಕ್ಷಣಿಕ ವರ್ಷವನ್ನು ಬೇಗನೆ ಆರಂಭಿಸುವುದರಿಂದ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದಾರೆಯೇ ಎಂಬುದನ್ನು ತಿಳಿಯಲು ನಾವು ಬಯಸಿದ್ದೇವೆ. ಗೋವಾದಾದ್ಯಂತದ ಶಾಲೆಗಳಲ್ಲಿ ಶೇಕಡಾ 90 ರಷ್ಟು ಹಾಜರಾತಿ ಇದೆ. ಕೆಲ ಶಾಲೆಗಳಲ್ಲಿ ಶೇಕಡಾ 100 ರಷ್ಟು ಹಾಜರಾತಿಯಿದೆ. ಎಲ್ಲಾ ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಬಂದಿದ್ದಾರೆ” ಎಂದು ಅವರು ಹೇಳಿದರು.ಬಹುತೇಕರ ವಿದ್ಯಾರ್ಥಿಗಳು ಸಂತಸ, ಕೆಲವರ ಅಸಮಾಧಾನ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಲೋಲಿಯಂಕರ್, ಏಪ್ರಿಲ್​ನಿಂದ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವುದಕ್ಕೆ ಬಹುತೇಕ ವಿದ್ಯಾರ್ಥಿಗಳು ಸಂತೋಷವಾಗಿದ್ದಾರೆ. ಆದಾಗ್ಯೂ, ಕೆಲ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!