ನಾಳೆ ಸೆಕೆಂಡ್ ಪಿಯು ಫಲಿತಾಂಶ | ಪಿಯು ಬೋರ್ಡ್ ಮಾಹಿತಿ

Picture of Savistara

Savistara

Bureau Report

ಏ.8ರ ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪಿಯು ಬೋರ್ಡ್ ಪ್ರಕಟಣೆ ಹೊರಡಿಸಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ.ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದೆ.ಇನ್ನು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!