ಇಂದು ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Picture of Savistara

Savistara

Bureau Report

ಫಲಿತಾಂಶ ಸಿಗುವ ವೆಬ್‌ಸೈಟ್‌ www.karresults.nic.in ಮತ್ತು kseab.karnataka.gov.in

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ ಮಧ್ಯಾಹ್ನ 1.30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಅಪ್‌ಲೋಡ್‌ ಅಗಲಿದೆ.ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1ರಿಂದ ಆರಂಭಗೊಂಡು ಮಾರ್ಚ್ 20ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ವ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್​ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ.ಪಿಯು ಫಲಿತಾಂಶ ಲಭ್ಯವಾಗುವ ವೆಬ್‌ಸೈಟ್‌ : www.karresults.nic.inಫಲಿತಾಂಶ ಚೆಕ್‌ ಮಾಡುವ ವಿಧಾನ:ಅಧಿಕೃತ ವೆಬ್‌ಸೈಟ್‌ karresults.nic.in ಹೋಗಿ, ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2025 ಲಿಂಕ್ ಅನ್ನು ಕ್ಲಿಕ್ ಮಾಡಿ,ಸ್ಟ್ರೀಮ್ ಆಯ್ಕೆಮಾಡಿ ಮತ್ತು ನೋಂದಣಿ ಸಂಖ್ಯೆಯನ್ನು ಟೈಪ್‌ ಮಾಡಿ. ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ, ಸ್ಕೋರ್‌ಕಾರ್ಡ್ ಪಿಡಿಎಫ್ ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ. kseab.karnataka.gov.in ಈ ವೆಬ್‌ಸೈಟಿನಲ್ಲೂ ಫಲಿತಾಂಶ ಸಿಗುತ್ತದೆ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!