ಕರಾವಳಿ ಅವಳಿ ಜಿಲ್ಲೆಗಳು ಪ್ರಥಮ, ದ್ವಿತೀಯ | ಬಾಲಕಿಯರೇ ಮೇಲುಗೈ

Picture of Savistara

Savistara

Bureau Report

ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಎಂದಿನಂತೆ ಉಡುಪಿ ಜಿಲ್ಲೆ ಪ್ರಥಮಸ್ಥಾನ ಪಡೆದಿದ್ದು, ದ.ಕ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಕಲಾ ವಿಭಾಗದಲ್ಲಿ ಸಂಜನಾ ಬಾಯಿ, ವಾಣಿಜ್ಯ ವಿಭಾಗದಲ್ಲಿ ದೀಪಾಶ್ರೀ, ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್, ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಬಾರಿ 73.4% ಮಕ್ಕಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 57%, ಅನುದಾನಿತ ಕಾಲೇಜುಗಳಲ್ಲಿ 60%, ಅನುದಾನ ರಹಿತ ಕಾಲೇಜುಗಳಲ್ಲಿ 90%, ವಸತಿ ಶಾಲೆಗಳಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.ಪಿಯುಸಿ ಪರೀಕ್ಷೆಯ ದ್ವಿತೀಯ ಮತ್ತು ತೃತೀಯ ಪರೀಕ್ಷೆಗಳನ್ನು ಈ ಬಾರಿ ಕಳೆದ ಬಾರಿಗಿಂತ ಬೇಗನೆ ಮಾಡುತ್ತಿದ್ದೇವೆ. ನಾವು ಅನುತ್ತೀರ್ಣರಾದ ಮಕ್ಕಳನ್ನು ಕಡೆಗಣಿಸುವುದಿಲ್ಲ. ಅವರ ಭವಿಷ್ಯದ ಬಗ್ಗೆಯೂ ಕಾಳಜಿ ವಹಿಸುತ್ತಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿಸಿಟಿವಿ ಕೆಮೆರಾ ಅಳವಡಿಸಲಾಗಿತ್ತು. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಈ ಬಾರಿ ದ್ವಿತೀಯ ಪರೀಕ್ಷೆಯಲ್ಲೂ ಸಹ ಸಿಸಿಟಿವಿ ಅಳವಡಿಸಲಾಗಿತ್ತು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!