ಮುಂಬೈ ದಾಳಿಯ ಆರೋಪಿ ರಾಣಾ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ ಸಾಧ್ಯತೆ: ಮೂಲಗಳು

Picture of Savistara

Savistara

Bureau Report

ನ್ಯೂಯಾರ್ಕ್: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹಶ್ವ‌ರ್ ರಾಣಾ ಅವರನ್ನು ಅಮೆರಿಕದಿಂದ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಸರ್ಕಾರಿ ಮೂಲಗಳ ಪ್ರಕಾರ, ಭಾರತದ ಬಹು ಏಜೆನ್ಸಿ ತಂಡವು ಅಮೆರಿಕಕ್ಕೆ ತೆರಳಿದ್ದು, ಎಲ್ಲ ದಾಖಲೆಗಳು ಮತ್ತು ಕಾನೂನುಬದ್ಧತೆಗಳನ್ನು ಅಮೆರಿಕದ ಅಧಿಕಾರಿಗಳೊಂದಿಗೆ ಪೂರ್ಣಗೊಳಿಸಲಾಗುತ್ತಿದೆ.ರಾಣಾ ಅವರನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ ತುಂಬಾ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.ರಾಣಾ ಅವರನ್ನು ಬುಧವಾರ ಭಾರತಕ್ಕೆ ಕರೆತರುತ್ತಿಲ್ಲ. ಆದರೆ, ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.

ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ರಾಣಾ ಅರ್ಜಿಯನ್ನು ತಿರಸ್ಕರಿಸಿದ ನಂತರ ಭಾರತಕ್ಕೆ ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ಉಗ್ರನ ಕೊನೆಯ ಪ್ರಯತ್ನ ವಿಫಲವಾಗಿದ್ದು, ಅದಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಆಗುತ್ತಿದೆ.ಪ್ರಸ್ತುತ ರಾಣಾ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ನನ್‌ ಸೆಂಟರ್‌ನಲ್ಲಿದ್ದಾನೆ.ರಾಣಾ ತನ್ನ ಹಸ್ತಾಂತರ ತಡೆಯಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಆದರೆ, ನ್ಯಾಯಮೂರ್ತಿ ಕಗನ್ ಮಾರ್ಚ್ 6ರಂದು ಅದನ್ನು ನಿರಾಕರಿಸಿದರು ಎಂದು ನ್ಯೂಯಾರ್ಕ್ ಮೂಲದ ಭಾರತೀಯ-ಅಮೆರಿಕನ್ ವಕೀಲ ರವಿ ಬಾತ್ರಾ ಪಿಟಿಐಗೆ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!