ಗೃಹ & ವಾಹನ ಸಾಲಗಾರರಿಗೆ ಮತ್ತಷ್ಟು ರಿಲೀಫ್-RBIನಿಂದ ಮತ್ತೆ ರೆಪೋ ದರ ಇಳಿಕೆ!

Picture of Savistara

Savistara

Bureau Report

ವಾಹನ, ಗೃಹ ಸಾಲಗಾರರಿಗೆ ಆರ್ ಬಿಐ ಗುಡ್ ನ್ಯೂಸ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ಬುಧವಾರ(ಏ.09) ಸಾಲದ ಮೇಲಿನ ಬಡ್ಡಿ ದರವನ್ನು ಸತತ ಎರಡನೇ ಬಾರಿಗೆ ಇಳಿಕೆ ಮಾಡುವ ಮೂಲಕ ಗೃಹ ಮತ್ತು ವಾಹನ ಸಾಲಗಾರರಿಗೆ ದೊಡ್ಡ ರಿಲೀಫ್ ನೀಡಿದಂತಾಗಿದೆ.ಆರ್ ಬಿಐನ ನೂತನ ಗವರ್ನರ್ ಸಂಜಯ್ ಮಲ್ಲೋತ್ರಾ ಅವರು ಅಧಿಕಾರ ಸ್ವೀಕರಿಸಿದ ನಂತರ ನಡೆದ ಆರ್ ಬಿಐನ ಎರಡನೇ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.ಸೋಮವಾರದಿಂದ ಆರಂಭಗೊಂಡಿದ್ದ ಆರು ಮಂದಿ ಸದಸ್ಯರನ್ನೊಳಗೊಂಡ ಭಾರತೀಯ ರಿಸರ್ವ್ ಬ್ಯಾಂಕ್ ನ ವಿತ್ತೀಯ ನೀತಿ ಸಮಿತಿಯ ಸಭೆಯಲ್ಲಿ 25 ಬೇಸಿಸ್ ಪಾಯಿಂಟ್ಸ್ ರೆಪೋ ದರವನ್ನು ಇಳಿಕೆ ಮಾಡುವ ನಿರ್ಧಾರ ಕೈಗೊಳ್ಳುವ ಮೂಲಕ ರೆಪೋ ದರ ಶೇ.6ಕ್ಕೆ ಇಳಿದಂತಾಗಿದೆ.6.25ರಷ್ಟಿದ್ದ ರೆಪೋ ದರದಲ್ಲಿ ಶೇ.25 ಬೇಸಿಸ್ ಪಾಯಿಂಟ್ಸ್ ಇಳಿಕೆ ಮಾಡಲು ವಿತ್ತೀಯ ನೀತಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಂಡಿರುವುದಾಗಿ ಆರ್ ಬಿಐ ಗವರ್ನರ್ ಸಂಜಯ್ ಮಲ್ಲೋತ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂಜಯ್‌ ಮಲ್ಲೋತ್ರಾ ಅವರು ಆರ್ ಬಿಐ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ನಡೆದ ಮೊದಲ ವಿತ್ತೀಯ ನೀತಿ ಸಮಿತಿ ಸಭೆಯಲ್ಲಿ ಶೇ.6.50ರ ರೆಪೋ ದರದಲ್ಲಿ ಶೇ.25 ಬೇಸಿಸ್ ಪಾಯಿಂಟ್ಸ್ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿತ್ತು. 2020ರ ನಂತರ ಇದೇ ಮೊದಲ ಬಾರಿಗೆ ಆರ್ ಬಿಐ ರೆಪೋ ದರ ಇಳಿಕೆ ಮಾಡಿತ್ತು.ರೆಪೋ ದರ ಇಳಿಕೆ ನಂತರ ಕೆನರಾ ಬ್ಯಾಂಕ್, ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ ಸೇರಿದಂತೆ ಹಲವು ಬ್ಯಾಂಕ್ ಗಳು ಗೃಹಸಾಲಕ್ಕೆ ಸಂಬಂಧಿಸಿದಂತೆ ಬಡ್ಡಿದರ ಪರಿಷ್ಕರಿಸಿ ಕಡಿತಗೊಳಿಸಿತ್ತು. ಇದರಿಂದ ಗೃಹ ಸಾಲ ಪಡೆದಿರುವವರ ಮೇಲಿನ ಹೊರೆ ಸ್ವಲ್ಪ ಇಳಿದಂತಾಗಿತ್ತು. ಇದೀಗ ಶೇ.6ರ ಬಡ್ಡಿದರದಿಂದ ಗೃಹ ಸಾಲದ ಬಡ್ಡಿದರ ಇನ್ನಷ್ಟು ಇಳಿಯುವ ಮೂಲಕ ಗೃಹ ಮತ್ತು ವಾಹನ ಸಾಲಗಾರರು ನಿಟ್ಟುಸಿರು ಬಿಡುವಂತಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!