ಏಪ್ರಿಲ್​ 12ರಿಂದ ಮಂಗಳೂರು–ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ: ಇಲ್ಲಿದೆ ರೈಲಿನ ವೇಳಾಪಟ್ಟಿ

Picture of Savistara

Savistara

Bureau Report

ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಧ್ವಜ ಪ್ರದರ್ಶನದ ಮೂಲಕ ರೈಲಿಗೆ ಚಾಲನೆ ನೀಡಲಿದ್ದಾರೆ.

ಸುಬ್ರಹ್ಮಣ್ಯ/ದ.ಕ: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್​ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಅವರು ತುಮಕೂರಿನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಈ ವಿಷಯವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೂ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. ಈ ವಿಸ್ತರಣೆಗೊಂಡ ಕಬಕ ಪುತ್ತೂರು ಎಕ್ಸ್‌ಪ್ರೆಸ್ ರೈಲನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಧ್ವಜ ಪ್ರದರ್ಶನದ ಮೂಲಕ ಆರಂಭಿಸಲಿದ್ದಾರೆ.

ರೈಲ್ವೆ ಸಚಿವಾಲಯದೊಂದಿಗೆ ನಿರಂತರವಾಗಿ ಪ್ರಾಮುಖ್ಯತೆಯನ್ನು ಮುಂದಿಟ್ಟು, ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಈ ಮೂಲಕ ಕರಾವಳಿ ಮತ್ತು ಕೇರಳ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ.

ರೈಲಿನ ವೇಳಾಪಟ್ಟಿ ಈ ಕೆಳಗಿನಂತಿದೆ:

ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್‌ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.ಮಂಗಳೂರು ಸೆಂಟ್ರಲ್‌-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್‌ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್‌ ತಲುಪಲಿದೆ.

[t4b-ticker]
error: Content is protected !!