ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು | 10 ಕೋಟಿ ರೂ ನೀಡುವಂತೆ ನೋಟಿಸ್ ಜಾರಿ

Picture of Savistara

Savistara

Bureau Report

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ‘ದೂತ’ ಹೆಸರಿನ ಯೂಟ್ಯೂಬರ್‌ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾ‌ರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ.ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು.ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!