ದೇವರಕೊಲ್ಲಿ ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆ |ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ| ಮೂವರು ಪೊಲೀಸರ ವಶಕ್ಕೆ

Picture of Savistara

Savistara

Bureau Report

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ ಯಾಗಿದ್ದು ಈ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಘಟನೆಯ ಬಗ್ಗೆ ಪ್ರಕರಣ ಬಯಲಿಗೆ ಬಂದಿದೆ.ಏ 12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು.ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದ್ದು ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದಾಗ ಕಾರಿನಲ್ಲಿದ್ದವರು ಪುತ್ತೂರು ನಿವಾಸಿಗಳಾಗಿದ್ದು ಅವರ ಹೆಸರುಗಳು ಫಜ್ಜುದ್ದೀನ್, ಮುಷ್ಕಾಕ್, ಜಾಬಿ‌ರ್ ಎಂದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಅಲ್ಲದೆ ಕಾರಿನ ಲ್ಲಿದ್ದ ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!